ನವದೆಹಲಿ: ಚುನಾವಣಾ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದರು ಎಂಬ ಆರೋಪ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಸಂಸದ ಸ್ಥಾನದಿಂದ ವಜಾ ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದ್ದು, ಮತ್ತೆ ಸಂಸದ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ. ಚುನಾವಣಾ ಸಮಯದಲ್ಲಿ ಆದ ಪ್ರಮಾದದ ಕುರಿತು ಎ. ಮಂಜು ಹಾಗೂ ದೇವರಾಜೇಗೌಡ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿತ್ತು.
ಲೋಕಸಭಾ ಚುನಾವಣೆ ಬೇರೆ ಹತ್ತಿರವಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಸೋಲಿಸಲು ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಬೇರೆ ಮಾಡಿಕೊಂಡಿದೆ. ಹೀಗಿರುವಾಗ ಸಂಸದ ಸ್ಥಾನದ ಅನರ್ಹತೆ ಮಾಡಿದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವಂತೆಯೇ ಇರಲಿಲ್ಲ. ಈ ಆದೇಶಕ್ಕೆ ತಡೆ ನೀಡಬೇಕು ಎಂದೇ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ವಿಚಾರವನ್ನು ಪ್ರಜ್ವಲ್ ಮೊದಲು ತನ್ನ ತಾತ ದೇವೇಗೌಡ ಅವರಿಗೆ ತಿಳಿಸಿದ್ದಾರೆ. ವಿಶೇಷ ಸಂಸತ್ ಅಧಿವೇಶನ ಆರಂಭವಾಗಿರುವ ಕಾರಣ, ದೆಹಲಿಗೆ ಬಂದು ಅಧಿವೇಶನಕ್ಕೆ ಹಾಜರಾಗಲು ಸೂಚಿಸಿದ್ದಾರೆ ಎನ್ನಲಾಗಿದೆ.