ಸುದ್ದಿಒನ್ : ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಿದೆ ಎಂಬ ಊಹಾಪೋಹಗಳು ದಟ್ಟವಾಗಿವೆ. ಮತ್ತೊಂದೆಡೆ ಸೋಮವಾರ ಸಂಜೆ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಈ ಮಹಿಳಾ ಮೀಸಲಾತಿ ಮಸೂದೆ ನಮ್ಮದೇ ಎಂದು ಹೇಳಿದರು.
ಹಲವು ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತಿದೆ ಎಂಬ ಸುದ್ದಿಯನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಮಹಿಳಾ ಮೀಸಲಾತಿ ಮಸೂದೆ ಕಾಂಗ್ರೆಸ್ ಪಕ್ಷದ ಬಹುಕಾಲದ ಬೇಡಿಕೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಕುರಿತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತನಾಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ನಮ್ಮದೇ ಎಂದು ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
Our PM says he’s a crusader for women’s empowerment? Time for him to rise above party politics, walk-his-talk & have the Women’s Reservation Bill passed by Parliament. The Congress offers him its unconditional support.
Attached is my letter to the PM. #MahilaAakrosh pic.twitter.com/IretXFFvvK
— Rahul Gandhi (@RahulGandhi) July 16, 2018
ಸಂಸತ್ತಿನ ಉಭಯ ಸದನಗಳಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿರುವಾಗಲೇ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿರುವುದು ಗಮನಾರ್ಹ. ಮಂಗಳವಾರ ಸಂಸತ್ತಿಗೆ ಬಂದಿದ್ದಾಗ ಮಹಿಳಾ ಮೀಸಲಾತಿ ಮಸೂದೆ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ಅದು ನಮ್ಮದು ಎಂದು ಉತ್ತರಿಸಿದರು.
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಅನುಮೋದನೆ ದೊರೆತಿರುವ ಸುದ್ದಿಯ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದರು.
It’s been a long-standing demand of the Congress party to implement women’s reservation. We welcome the reported decision of the Union Cabinet and await the details of the Bill. This could have very well been discussed in the all-party meeting before the Special Session, and… https://t.co/lVI9RLHVY6
— Jairam Ramesh (@Jairam_Ramesh) September 18, 2023
ಈ ಮಹಿಳಾ ಮೀಸಲಾತಿ ಮಸೂದೆಯ ಸಂಪೂರ್ಣ ವಿವರಗಳಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. ವಿಶೇಷ ಸಂಸತ್ ಅಧಿವೇಶನಕ್ಕೂ ಮುನ್ನ ಆಯೋಜಿಸಿರುವ ಸರ್ವಪಕ್ಷ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತು ಚರ್ಚೆ ನಡೆಸಿದ್ದರೆ ಉತ್ತಮ ಎಂದು ಹೇಳಿಕೆ ನೀಡಿದ್ದಾರೆ. ಇದನ್ನು ಗುಟ್ಟಾಗಿ ತರುವ ಬದಲು.. ಎಲ್ಲಾ ಪಕ್ಷಗಳ ಒಪ್ಪಿಗೆ ಪಡೆದು ಒಮ್ಮತದಿಂದ ಏಕಾಭಿಪ್ರಾಯ ಮಡೆದಿದ್ದರೆ ಚೆನ್ಬಾಗಿತ್ತು ಎಂದರು.
ಮಂಗಳವಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಮಂಡಿಸಿದರೆ ಅದು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ಗೆಲುವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದರು.
ಯುಪಿಎ 2 ಸರಕಾರದ ಅವಧಿಯಲ್ಲಿ 2010ರ ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಈ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದರೂ ಲೋಕಸಭೆಯಲ್ಲಿ ಚರ್ಚೆಯಾಗಲಿಲ್ಲ. ಆದರೆ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆ ಹಲವು ವರ್ಷಗಳಿಂದ ಬಾಕಿ ಉಳಿದಿದೆ. 1996ರಲ್ಲಿ ಎಚ್.ಡಿ. ದೇವೇಗೌಡ ನೇತೃತ್ವದ ಅಂದಿನ ಆಡಳಿತಾರೂಢ ಸಂಯುಕ್ತ ರಂಗ ಸರ್ಕಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿತ್ತು. ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಸರ್ಕಾರಗಳ ಅವಧಿಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿದ್ದರೂ ಲೋಕಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ.