ಸುದ್ದಿಒನ್, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಸಿ.ಕೆ.ಸಂಧ್ಯಾರವರಿಗೆ ಚಿನ್ನದ ಪದಕ ಪ್ರಶಸ್ತಿ ಲಭಿಸಿದೆ.
ಗೃಹರಕ್ಷಕದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಯನ್ನು ಬೆಂಗಳೂರಿನ ಜಯನಗರದ ಆರ್.ಎ.ಮುಂಡ್ಕೂರ್, ಅಗ್ನಿಶಾಮಕ ಅಕಾಡೆಮಿ ಸಭಾಂಗಣದಲ್ಲಿ 22 ರ ಶುಕ್ರವಾರ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿ.ಕೆ.ಸಂಧ್ಯಾರವರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















