ಸುದ್ದಿಒನ್,ಚಿತ್ರದುರ್ಗ, ಸೆಪ್ಟೆಂಬರ್. 22 : ನಟ ಅಭಿಷೇಕ್ ಅಂಬರೀಷ್ ಅವರು ನಿನ್ನೆ (ಗುರುವಾರ) ಹಿಂದೂ ಮಹಾಗಣಪತಿ ದರ್ಶನ ಪಡೆದರು.
ನಗರದ ಬಿ.ಡಿ. ರಸ್ತೆಯ ಸರ್ಕಾರಿ ವಿಜ್ಞಾನ ಕಾಲೇಜಿನ ಮುಂಭಾಗದ ಜೈನಧಾಮದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಚಿತ್ರದುರ್ಗದ ಪ್ರಮುಖ ಆಕರ್ಷಣೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಗಣ್ಯರು ಅಥವಾ ನಾಡಿನ ಪ್ರಮುಖ ವ್ಯಕ್ತಿಗಳು ಚಿತ್ರದುರ್ಗಕ್ಕೆ ಬಂದರೆ ಇಲ್ಲಿನ ಹಿಂದೂ ಮಹಾಗಣಪತಿ ದರ್ಶನ ಪಡೆಯುವುದು ವಾಡಿಕೆಯಾಗಿದೆ.
ಚಿತ್ರದುರ್ಗ ಹಿಂದೂ ಮಹಾಗಣಪತಿ ದರ್ಶನ ಪಡೆದ ಅಭಿಷೇಕ್ ಅಂಬರೀಷ್ pic.twitter.com/GX1L7XCBcw
— suddione-kannada News (@suddione) September 21, 2023

ಅದರಂತೆಯೇ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ್ದ ನಟ ಅಭಿಷೇಕ್ ಅಂಬರೀಶ್ ಇಲ್ಲಿನ ಹಿಂದೂ ಮಹಾಗಣಪತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ರೈತರು ಕಾವೇರಿ ಸಮಸ್ಯೆ ಸೇರಿದಂತೆ ಅನೇಕ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರ ಕಷ್ಟಕಾರ್ಪಣ್ಯಗಳಿಗೆ ಶೀಘ್ರವೇ ಪರಿಹಾರ ಸಿಗಲಿ ಎಂದು ಇಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಂಸದರಾದ ಸುಮಲತಾ ಅಂಬರೀಶ್ ಅವರ ಜೊತೆಗೆ ನಾನೂ ಕೂಡ ಭಾಗವಹಿಸುತ್ತೇನೆ. ನಮ್ಮ ಕುಟುಂಬ ಯಾವತ್ತೂ ರೈತರ ಪರ ಎಂದು ತಿಳಿಸಿದರು.
ಈಗಾಗಲೇ ಚಿತ್ರರಂಗದ ಅನೇಕ ನಾಯಕರು ಕಾವೇರಿ ಹೋರಾಟವನ್ನು ಬೆಂಬಲಿಸಿದ್ದಾರೆ. ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಕನ್ನಡ ಚಿತ್ರರಂಗ ಎಂದೂ ಕೈಬಿಡುವುದಿಲ್ಲ. ರೈತರ ಪರವಾಗಿ ನಾವೆಲ್ಲರೂ ಹೋರಾಟಕ್ಕೆ ಸಿದ್ದ.
ಈ ಹೋರಾಟಕ್ಕೆ ಒಂದು ವೇದಿಕೆ ಸಿದ್ಧವಾಗಲಿದ್ದು, ಈ ವೇದಿಕೆಗೆ ಎಲ್ಲರೂ ಬಂದು ಬೆಂಬಲ ಸೂಚಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಸಿ. ನಾಗರಾಜ್ ಜೊತೆಯಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















