Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲಾತಂಡಗಳು ಮನೋರಂಜನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸಿ : ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್

---Advertisement---

 

ಚಿತ್ರದುರ್ಗ : ಕಲಾತಂಡಗಳು ಮನೋರಂಜನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಹಿತಿ ಶಿಕ್ಷಣ ಸಂವಹನ, ಸಾಮಾಜಿಕ ವರ್ತನೆ ಬದಲಾವಣೆ ಸಂವಹನ ಕಾರ್ಯಕ್ರಮದಡಿಯಲ್ಲಿ ಜಾನಪದ ಕಲಾತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಮಾತನಾಡಿದರು.

ಬೀದಿ ನಾಟಕಗಳ ಮೂಲಕ ನೀಡುವ ಕಲಾ ಪ್ರದರ್ಶನಗಳು ಬೆಳೆದು ಬಂದ ರೀತಿಯನ್ನು ತಿಳಿಸಿ, ಆಧುನಿಕ ಪೈಪೋಟಿ ಇರುವ ಈ ಸಂದರ್ಭದಲ್ಲಿ ಕಲಾತಂಡಗಳು ಮನೋರಂಜನೆಯೊಂದಿಗೆ ಸಾರ್ವಜನಿಕರು, ಆರೋಗ್ಯ ಇಲಾಖೆಯ ಯೋಜನೆಗಳನ್ನು ಒಪ್ಪಿಕೊಳ್ಳುವಂತಹ ಕಾರ್ಯನಿರ್ವಹಣೆ, ನಿಪುಣತೆ ಹೊಂದಬೇಕಿದೆ. ಮನೋರಂಜನೆಯೊಂದಿಗೆ ಇಲಾಖೆ ಯೋಜನೆಗಳ್ನು ಜನರಿಗೆ ತಲುಪಿಸಿ ಎಂದು ಹೇಳಿದರು.

ಜಿಲ್ಲಾ ಕುಟುಂಬ ಯೋಜನೆಗಳ ಅನುಷ್ಠಾನಾಧಿಕಾರಿ ಡಾ. ರೇಣುಪ್ರಸಾದ್ ಮಾತನಾಡಿ, ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಪುರುಷರ ಭಾಗವಹಿಸುವಿಕೆ ಬಹಳಷ್ಟು ಕಡಿಮೆ ಇದೆ. ಬಾಲ್ಯ ವಿವಾಹಗಳು ಹೆಚ್ಚು ಹೆಚ್ಚು ನಡೆಯುತ್ತಲೇ ಇದೆ. ತಾಯಿ ಮರಣ ಶಿಶು ಮರಣ ನಿಯಂತ್ರಿಸಲು ಸ್ಥಳೀಯ ಭಾಷೆ ಬಳಸಿ ಜಾನಪದ ಕಲೆಯ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಬಗ್ಗೆ ಮನನ ಮಾಡಿಕೊಡಿ ಎಂದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ ಮಾತನಾಡಿ, ಕಲಾತಂಡಗಳ ಆಯ್ಕೆಯು ಕಲಾತಂಡಗಳ ಅನುಭವ, ಉಪಯೋಗಿಸುವ ವಾದ್ಯ ಪರಿಕರಗಳು, ಕಲಾ ಪ್ರಕಾರ ಭಾಷೆಯ ಬಳಕೆ ಮತ್ತು ಪ್ರಭುತ್ವ, ಕಲಾತಂಡಗಳು ಉಪಯೋಗಿಸುವ ಸಮವಸ್ತ್ರ ಆಧಾರಿತ ಮಾನದಂಡ ರಚಿಸಿ ಅಂಕ ನಿಗದಿಪಡಿಸಲಾಗಿದೆ. ಗಳಿಸಿದ ಅಂಕದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಆರ್.ಗೌರಮ್ಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ಬಿ.ಹನುಮಂತಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಜಾನಕಿ, ಜಿಲ್ಲಾ ಮೇಲ್ವಿಚಾರಣಾ ಅಧಿಕಾರಿ ಆಂಜನೇಯ, ಗಣಕಯಂತ್ರ ನಿರ್ವಾಹಕ ಜಬ್ಬರ್ ಸೇರಿದಂತೆ ಐದು ಕಲಾ ತಂಡಗಳಿಂದ 25 ಜನ ಕಲಾವಿದರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...