Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೋರಾಟದ ನಡುವೆಯೂ ತಮಿಳುನಾಡಿಗೆ ಹರಿದ ಕಾವೇರಿ : KRS ಜಲಾಶಯದ ಇಂದಿನ ಮಟ್ಟ ಎಷ್ಟು..?

Facebook
Twitter
Telegram
WhatsApp

 

ಮಂಡ್ಯ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ರೈತರು ಇಂದು ದೊಡ್ಡಮಟ್ಟದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು, ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್ ಗೆ ಕರೆ ನೀಡಿವೆ. ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂಬ ಉದ್ದೇಶ ಇದಾಗಿದೆ. ಆದರೆ ಇಷ್ಟು ದೊಡ್ಡಮಟ್ಟದ ಹೋರಾಟದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲಾಗಿದೆ. ಇದು ರೈತರಿಗೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮಳೆ ಇಲ್ಲದೆ ಕೆಆರ್ಎಸ್ ನಲ್ಲಿ ಮೊದಲೇ ನೀರಿನ ಪ್ರಮಾಣ ಕಡಿಮೆ ಇದೆ. ಹೀಗಿರುವಾಗ ಇಂದು ನೀರು ಬಿಟ್ಟ ಪರಿಣಾಮ ನೀರಿನ ಮಟ್ಟ ಕುಸಿದಿದೆ. ಜಲಾಶಯಕ್ಕೆ ಬರುತ್ತಿದ್ದ ಒಳ ಹರಿವು ಸಹ ಇಳಿಮುಖವಾಗಿದೆ. ಇಂದು ಕೆಆರ್ಎಸ್ ಜಲಾಶಯದ ಮಟ್ಟ 90 ಅಡಿಗೆ ಕುಸಿದಿದೆ. ಇದು ರೈತರನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ.

ಸುಪ್ರೀಂ ಕೋರ್ಟ್ ಇನ್ನು ಹದಿನೈದು ದಿನಗಳ‌ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಹೀಗಾಗಿ ಹೋರಾಟದ‌ ನಡುವೆಯೂ ಇಂದು ಸರ್ಕಾರ ನೀರು ಬಿಟ್ಟಿದೆ. ಸುಮಾರು 2973 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಿದೆ. ಹೀಗೆ ನೀರನ್ನು ಬಿಡುತ್ತಾ ಹೋದರೆ ಮುಂದೊಂದು ದಿನ ನೀರಿನ ಸಮಸ್ಯೆ ಅನುಭವಿಸುವುದರಲ್ಲಿ ಅನುಮಾನವೇ ಇಲ್ಲ. ಕೃಷಿಯ ಉಪಯೋಗಕ್ಕೆ ಇರಲಿ, ಕುಡಿಯುವ ನೀರಿಗೂ ಬರ ಬರಲಿದೆ ಎಂಬುದು ಎಲ್ಲರ ಆತಂಕವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!