ಬೆಂಗಳೂರು: ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಸದ್ಯ ಬ್ಯಾಂಕ್ ಜನಾರ್ದನ್ ಆರೋಗ್ಯ ಸುಧಾರಿಕೆ ಕಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಹಿರಿಯ ಕಲಾವಿದರು ಅವರನ್ನು ನೋಡಲು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಅವರ ಆರೋಗ್ಯದ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಜನಾರ್ದನ್ ಅವರಿಗೆ ಇದು ಮೂರನೇ ಬಾರಿ ಹಾರ್ಟ್ ಅಟ್ಯಾಕ್ ಆಗಿದೆ. ಹೃದಯದ ಸಮಸ್ಯೆ ಕಾಣಿಸಿಕೊಂಡೊಡನೆ ಬ್ಯಾಂಕ್ ಜನಾರ್ದನ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಚೇತರಿಕೆ ಕಂಡಿದೆ. ಇನ್ನು ಬ್ಯಾಂಕ್ ಜನಾರ್ದನ್ ಅವರಿಗೆ ಆಂಜಿಯೊಗ್ರಾಮ್ ಮಾಡಿಲ್ಲ.
ಹಿರಿಯ ನಟರ ಆರೋಗ್ಯ ವಿಚಾರಿಸಿ ಹಿರಿಯ ಕಲಾವಿದೆ ರೇಣು ಶಿಕಾರಿ ಮಾತನಾಡಿ, ಬ್ಯಾಂಕ್ ಜನಾರ್ದನ್ ಅವರನ್ನು ಭೇಟಿ ಮಾಡಲು ಬಂದಿದ್ದೆವು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮನ್ನೆಲ್ಲ ನೋಡಿದ ಅವರಿಗೆ ಕಣ್ಣಲ್ಲಿ ನೀರು ಬಂತು. ಈಗ ಆರಾಮವಾಗಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











