Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದ ಮುರುಘಾಮಠಕ್ಕೆ ಪ್ರಧಾನ ಜಿಲ್ಲಾ ನ್ಯಾಯಾಧೀಶರೇ ಆಡಳಿತಾಧಿಕಾರಿಯಾಗಿ ಮುಂದುವರಿಕೆ : ಹೈಕೋರ್ಟ್ ಮಹತ್ವದ ಆದೇಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ಚಿತ್ರದುರ್ಗದ ಮುರುಘಾಮಠ ಮತ್ತು ವಿದ್ಯಾಪೀಠಕ್ಕೆ ಮುಂದಿನ ಪೀಠಾಧ್ಯಕ್ಷರು ನೇಮಕವಾಗುವವರೆಗೂ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರೇ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ  ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ (ಸೆಪ್ಟೆಂಬರ್.27) ಈ ಆದೇಶ ನೀಡಿದೆ.

ಮಠದ ಬೈಲಾ ಪ್ರಕಾರ ಶ್ರೀಮುರುಘರಾಜೇಂದ್ರ ವಿದ್ಯಾಪೀಠದ ಅಧ್ಯಕ್ಷರು ಮಠದ ಜಗದ್ಗುರುಗಳೇ ಆಗಿರಬೇಕು ಎಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಪ್ರಕರಣದಲ್ಲಿ ದಾಖಲಾದ ದೂರಿನ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಮುರುಘಾಮಠಕ್ಕೆ ಹೊಸದಾಗಿ ಪೀಠಾಧ್ಯಕ್ಷರು ನೇಮಕವಾಗುವ ತನಕ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರೇ ಮುರುಘಾ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಪೀಠ ಹೇಳಿದೆ. ಪ್ರಸ್ತುತ ಶ್ರೀಮತಿ ಬಿ.ಎಸ್. ರೇಖಾ ಅವರು ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿ ಮತ್ತು ಸಿಇಒ ಆಗಿ ಭರತ್ ಕುಮಾರ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಶಿಕ್ಷಣ ಸಂಸ್ಥೆಗಳು, ಬಸವೇಶ್ವರ ಆಸ್ಪತ್ರೆ,  ವೈದ್ಯಕೀಯ ಕಾಲೇಜು, ವಿದ್ಯಾರ್ಥಿಗಳು, ಸಿಬ್ಬಂದಿ ಹಿತದೃಷ್ಟಿಯಿಂದ ಈ ಆದೇಶ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...