Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್ : ಕೋಟೆನಾಡಿನಲ್ಲಿ ಬಂದ್ ಹೇಗಿರುತ್ತೆ ? ಎಸ್.ಪಿ. ಹೇಳಿದ್ದೇನು ? ಶಾಲಾ-ಕಾಲೇಜುಗಳ ಇರುತ್ತಾ..? ಇರಲ್ವಾ..? ಇಲ್ಲಿದೆ ಮಾಹಿತಿ…!.

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ರಾಜ್ಯದಲ್ಲಿ ಮಳೆ ಇಲ್ಲದೆ‌ ಇದ್ದರು ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ನೂರಾರು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ನಾಳೆ(ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ಚಿತ್ರದುರ್ಗದಲ್ಲಿ ಸಾರ್ವಜನಿಕರ ದೈನಂದಿನ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

ಮಾರುಕಟ್ಟೆಗಳು, ಅಂಗಡಿಗಳು, ಶೋರೂಮ್‌ಗಳನ್ನು, ಶಾಲೆಗಳು, ಕಾಲೇಜುಗಳು ಅಥವಾ ಕಚೇರಿಗಳನ್ನು
ಬಲವಂತವಾಗಿ ಮುಚ್ಚಿಸುವಂತಿಲ್ಲ. ಸಾರ್ವಜನಿಕ ಸಾರಿಗೆ ಮತ್ತು ವಾಹನಗಳ (ಸರ್ಕಾರಿ ಅಥವಾ ಖಾಸಗಿ) ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿಪಡಿಸುವಂತಿಲ್ಲ.

ಗೌರವಾನ್ವಿತ ಸುಪ್ರೀಂ ಕೋರ್ಟ್/ಹೈಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ. ಜಿಲ್ಲೆಯಾದ್ಯಂತ ಸೂಕ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಇತರ ಸಾರ್ವಜನಿಕ ಆಸ್ತಿಗಳ ರಕ್ಷಣೆಗೆ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಅಧಿಕಾರಿಗಳು ಮೊಬೈಲ್ ಗಸ್ತು ತಿರುಗುತ್ತಿದ್ದಾರೆ.

ಕಾವೇರಿ ನೀರಿಗಾಗಿ ಮಂಗಳವಾರ ಬೆಂಗಳೂರು ಬಂದ್ ಯಶಸ್ವಿಯಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದರಿಂದ ಕಾವೇರಿ ಕೊಳ್ಳದಲ್ಲಿ ದಿನೇ ದಿನೇ ನೀರು ಖಾಲಿಯಾಗುತ್ತಿದೆ. ಇದು ರೈತರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!