Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ಕರ್ನಾಟಕ ಬಂದ್ : ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ :  ಜಿಲ್ಲಾಧಿಕಾರಿ ಆದೇಶದಲ್ಲೇನಿದೆ ?

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 :ಕಾವೇರಿ ನದಿ ನೀರನ್ನು ತಮಿಳುನಾಡು ರಾಜ್ಯಕ್ಕೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ನಾಳೆ (29-09-2023)  ಕರ್ನಾಟಕ ರಾಜ್ಯ ಬಂದ್‌ಗೆ ಕರೆ ನೀಡಿವೆ.

ಈ ಬಂದ್ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಅಂಚೆ ಕಚೇರಿ, ಬಿ.ಎಸ್.ಎನ್.ಎಲ್, ರೈಲ್ವೆ ಸ್ಟೇಷನ್, ಬ್ಯಾಂಕ್, ಆದಾಯ ತೆರಿಗೆ ಕಚೇರಿ ಮತ್ತು ಇತರೆ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಕೆ.ಎಸ್.ಆರ್.ಟಿ.ಸಿ ಇನ್ನಿತರೆ ಕಚೇರಿಗಳ ಬಳಿ ಪ್ರತಿಭಟನೆ ಮಾಡುವುದಾಗಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಟೋಲ್‌ಗಳಲ್ಲಿ ರಸ್ತೆ ತಡೆ ನಡೆಸುವ ಸಾಧ್ಯತೆಗಳಿರುವುದಾಗಿ ತಿಳಿದು ಬಂದಿದ್ದು, ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದ್ದು, ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಸಾರ್ವಜನಿಕ ಪ್ರಾಣ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗದಂತೆ ತಡೆಯುವ ಹಿನ್ನಲೆಯಲ್ಲಿ, ನಾಳೆ ಬೆಳಗ್ಗೆ 6-00 ಗಂಟೆಯಿಂದ ಸಂಜೆ 6-00 ಗಂಟೆವರೆಗೆ ಸಿ.ಆರ್.ಪಿ.ಸಿ. ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇದಾಜ್ಞೆ
ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಆದೇಶಿಸಿದ್ದಾರೆ.

ಈ ಆದೇಶದಂತೆ ಕೆಳಕಂಡ ನಿಬಂಧನೆಗಳನ್ನು ಒಳಪಟ್ಟಿರುತ್ತದೆ.

1) ಮೆರವಣಿಗೆ ಅಥವಾ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

2) ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

3) ಕಲ್ಲುಗಳನ್ನು ಕ್ಷಾರಪಧಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು ಯಾವುದೇ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

4) ಕಲ್ಲುಗಳನ್ನು ಮತ್ತು ಎಸೆಯುವಂತ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

5) ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.

6) ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

7) ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಿರುವುದನ್ನು ನಿಷೇಧಿಸಲಾಗಿದೆ.

8) ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಷಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂಥಹ ಮಾರಾಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.

ಮೇಲೆ ಕಾನೂನು ರೀತ್ಯಾ ಈ ಆದೇಶವು ಅಂತ್ಯಕ್ರಿಯೆ ಮೆರವಣಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ನಡೆಸುವ
ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!