ಬೆಂಗಳೂರು: ಕಾವೇರಿಗಾಗಿ ಬೆಂಗಳೂರು ಬಂದ್ ಬಳಿಕ ಕರ್ನಾಟಕ ಬಂದ್ ಮಾಡಲಾಗುತ್ತಿದೆ. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರ ಸಚಿವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಸಮಯದಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದವರು, ಈಗ ಎಲ್ಲಿ ಎಂದೇ ಪ್ರಶ್ನಿಸಿದ್ದಾರೆ.
ರಾಜ್ಯದ ಜನರ ವೋಟ್ ಮಾತ್ರ ಅವರಿಗೆ ಬೇಕು. ಕಾವೇರಿ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದು ಬೇಡವಾ..? ನೀರಿನ ವಿಚಾರದಲ್ಲಿ ಇಷ್ಟೆಲ್ಲಾ ಸಮಸ್ಯೆಗಳು ಆಗುತ್ತಿದ್ದರು ಪ್ರಧಾನಿ ಮೋದಿ ಮೌನವಹಿಸಿದ್ದಾರೆ. ಚುನಾವಣಾ ಸಮಯದಲ್ಲಿ ಮಾತ್ರ ಎಷ್ಟು ಬಾರಿ ರಾಜ್ಯಕ್ಕೆ ಬಂದರೂ. ಚುನಾವಣಾ ಪ್ರಚಾರದಲ್ಲಿ ನಿರಂತರವಾಗಿ ಪಾಲ್ಗೊಂಡಿದ್ದರು. ಈಗ ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಆಡಳಿತದ ಅವಧಿಯಲ್ಲಿಯೇ ಪ್ರಾಧಿಕಾರದ ರಚನೆಯಾಗಿತ್ತು. ಅವರು ಅಧಿಕಾರಕ್ಕೆ ಬಂದು 9 ವರ್ಷಗಳು ಆದರೂ ಯಾಕೆ ಇನ್ನು ಪರಿಹಾರ ಕಂಡು ಹಿಡಿಯಲಿಲ್ಲ. ತಮ್ಮ ಬೇಳೆ ಬೇಯಿಸಿಕೊಳ್ಳಲು ಮಾತ್ರ ರಾಜಕೀಯ ಮಾಡುತ್ತಾರೆ. ಕಾಂಗ್ರೆಸ್ ಈ ರೀತಿ ಯಾವತ್ತು ನಾಡಿನ ವಿಚಾರವಾಗಿ ದ್ರೋಹ ಮಾಡಿಲ್ಲ. ಆದರೆ ಬಿಜೆಪಿಯೇ ನಾಡದ್ರೋಹಿ ಪಕ್ಷ. ಯಾರೂ ಕೂಡ ಕಲ್ಲು ತೂರಾಟ ಮಾಡಬಾರದು ಎಂದು ಹೋರಾಟಗಾರರಿಗೂ ಇದೇ ವೇಳೆ ಮನವಿ ಮಾಡಿದ್ದಾರೆ.