ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.29 : ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯ ಘಟಕದ ನೇತೃತ್ವದಲ್ಲಿ ‘ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನ’ ವನ್ನು ರಾಜಧಾನಿ ನವದೆಹಲಿಯಲ್ಲಿ ನವೆಂಬರ್ 15, 2023 ರಂದು ದೆಹಲಿಯಲ್ಲಿ ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ‘ಕವಿಗೋಷ್ಠಿ ಹಾಗು ವಿಚಾರಗೋಷ್ಠಿ’ಯಲ್ಲಿ ಭಾಗವಹಿಸಲು ಚಿತ್ರದುರ್ಗ ಜಿಲ್ಲೆಯ ಪ್ರತಿಭಾವಂತ ಹೈಸ್ಕೂಲ್ / ಪಿಯುಸಿ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುವುದು.
ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಅಥವ ಪೋಷಕರು ಅಕ್ಟೋಬರ್ 02 ನೇ ತಾರೀಖಿನ ಒಳಗೆ ತಮ್ಮ ಮಕ್ಕಳ ಹೆಸರು, ವಿಳಾಸ ಹಾಗು ವಿವರಗಳನ್ನು ಜಿಲ್ಲಾ ಪರಿಷತ್ತು ಕಛೇರಿ : ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ (ರಿ.), ನಂ.24, 3ನೇ ಅಡ್ಡ ರಸ್ತೆ, ಎನ್.ಎಂ. ಲೇಔಟ್, ಕಾವೇರಿ ಇಂಡಸ್ಟ್ರೀಸ್ ಹತ್ತಿರ, ವಿದ್ಯಾನಗರ, ಚಿತ್ರದುರ್ಗ – 577502 ಈ ವಿಳಾಸಕ್ಕೆ ಅಥವ – 9972240239 / 9964376364 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











