Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 30 ರಂದು ಹೊಳಲ್ಕೆರೆ ಪಟ್ಟಣ ಗಣೇಶ ವಿಸರ್ಜನಾ ಶೋಭಾಯಾತ್ರೆ : ಸಂಚಾರ ಮಾರ್ಗ ಬದಲು

---Advertisement---

 

ಚಿತ್ರದುರ್ಗ. ಸೆ.29: ಇದೇ ಸೆಪ್ಟೆಂಬರ್ 30ರಂದು ಹೊಳಲ್ಕೆರೆ ಪಟ್ಟಣದ ಶ್ರೀ ವಿಶ್ವ ಹಿಂದೂ ಮಹಾ ಗಣಪತಿ ಸಮಿತಿಯಿಂದ ಗಣೇಶ ವಿಸರ್ಜನಾ ಮತ್ತು ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 369ರ ವಾಹನ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳವ ವಾಹನಗಳು ಚಿತ್ರಹಳ್ಳಿ ಗೇಟ್‍ನಿಂದ ವಿಭಾಗವಾಗಿ ಹೊಸದುರ್ಗಕ್ಕೆ ರಸ್ತೆಯಲ್ಲಿ ಸಂಚರಿಸಿ ಹೆಚ್.ಡಿ.ಪುರ ಮಾರ್ಗವಾಗಿ ಹೋಗುವುದು.

ಶಿವಮೊಗಕ್ಕೆ ಚಿಕ್ಕಜಾಜೂರು ಮಾರ್ಗವಾಗಿ ಹೊಳಲ್ಕೆರೆ ರೈಲ್ವೆ ಸ್ಟೇಷನ್ ಮುಖಾಂತರ ಹೋಗುವುದು.

ಹೊಸದುರ್ಗದಿಂದ ಶಿವಮೊಗ್ಗಕ್ಕೆ ಹೋಗುವ ವಾಹನಗಳು ಅವಿನಹಟ್ಟಿ ಗ್ರಾಮದ ಮುಖಾಂತರ ಚಲಿಸಿ ಅರೇಹಳ್ಳಿ ರೈಲ್ವೇ ಸ್ಟೇಷನ್ ಮುಖಾಂತರ ಶಿವಮೊಗ್ಗಕ್ಕೆ ಹೋಗುವುದು.

ಶಿವಮೊಗ್ಗದಿಂದ ಬರುವ ವಾಹನಗಳು ಅರೇಹಳ್ಳಿ ರೈಲ್ವೇ ಸ್ಟೇಷನ್‍ನಲ್ಲಿ ವಿಭಾಗವಾಗಿ ಚಿತ್ರದುರ್ಗ ಹೋಗುವ ವಾಹನಗಳು ಪೂಣಜೂರು, ಮಲ್ಕಾಪುರ, ಚಿಕ್ಕಜಾಜೂರು, ಬಿ.ದುರ್ಗ, ಭೀಮಸಮುದ್ರ ಮಾರ್ಗವಾಗಿ ಚಿತ್ರದುರ್ಗ ಹೋಗುವುದು.

ಹೊಸದುರ್ಗಕ್ಕೆ ಹೋಗುವ ವಾಹನಗಳು ಮಾಳೇನಹಳ್ಳಿ, ಅವಳೇಹಟ್ಟಿ, ಹೊಳಲ್ಕೆರೆ ಮುಖಾಂತರ ಹೊಸದುರ್ಗಕ್ಕೆ ಹೋಗುವುದು. ದಾವಣಗೆರೆಯಿಂದ ಬರುವ ವಾಹನಗಳು ಮಲ್ಕಾಪುರ, ಅರೇಹಳ್ಳಿ ರೈಲ್ವೆ ಸ್ಟೇಷನ್ ಮುಖಾಂತರ ಹೊಳಲ್ಕೆರೆಗೆ ಹೋಗುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment