Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಗೀಕಾರ | ಗೆಜೆಟ್ ಅಧಿಸೂಚನೆ ಬಿಡುಗಡೆ

---Advertisement---

ದಶಕಗಳಿಂದ ಬಾಕಿ ಉಳಿದಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಕೊನೆಗೂ ಮೋಕ್ಷ ಸಿಕ್ಕಿದೆ. ಇತ್ತೀಚೆಗಷ್ಟೇ ನಡೆದ ಸಂಸತ್ತಿನ ವಿಶೇಷ ಅಧಿವೇಶನಗಳಲ್ಲಿ ಈ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕೇಂದ್ರ ಸರ್ಕಾರ, ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆಯಲು ಕ್ರಮ ಕೈಗೊಂಡಿದೆ. ಇತ್ತೀಚೆಗಷ್ಟೇ ರಾಷ್ಟ್ರಪತಿಗಳು ಅಂಗೀಕಾರದ ಮುದ್ರೆ ಬಿದ್ದ ಬಳಿಕ ಈ ಮಸೂದೆ ಕಾನೂನಾಗಿ ರೂಪುಗೊಂಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಮುಖ್ಯಾಂಶಗಳು:

• ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಗಳ ಒಪ್ಪಿಗೆ

• ಮಹಿಳಾ ಮೀಸಲಾತಿ ಮಸೂದೆ ಕಾನೂನಾಗಿ ಅಂಗೀಕಾರವಾಗಿದೆ

• ಮಸೂದೆಯನ್ನು ಇತ್ತೀಚೆಗೆ ಉಭಯ ಸದನಗಳು ಅಂಗೀಕರಿಸಿದ್ದವು.

 

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನರೇಂದ್ರ ಮೋದಿ ಸರ್ಕಾರ ತಂದಿದ್ದ ಮಹಿಳಾ ಮೀಸಲಾತಿ ಮಸೂದೆ ಕಾನೂನಾಗಿ ಜಾರಿಗೆ ಬಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಇದರೊಂದಿಗೆ, ಈ ಮಹಿಳಾ ಮೀಸಲಾತಿ ಮಸೂದೆಯು ಮಹಿಳಾ ಮೀಸಲಾತಿ ಕಾಯಿದೆಯಾಗಿ ಮಾರ್ಪಟ್ಟಿದೆ. ಈ ನಿಟ್ಟಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಮಸೂದೆಗೆ ಅಂಗೀಕಾರದ ಮುದ್ರೆ ಬಿದ್ದ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಹೊಸ ಮಹಿಳಾ ಮೀಸಲಾತಿ ಕಾಯ್ದೆಯ ಪ್ರಕಾರ ಲೋಕಸಭೆ ಹಾಗೂ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸದಸ್ಯ ಸ್ಥಾನಗಳಲ್ಲಿ ಶೇ.33ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು.

128 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಭಾರತೀಯ ಉಪ ರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಗುರುವಾರ ಸಹಿ ಹಾಕಿದರು. ನಂತರ ಸಂವಿಧಾನದ 111ನೇ ಪರಿಚ್ಛೇದದ ಅಡಿಯಲ್ಲಿ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗಿತ್ತು.ಅಧ್ಯಕ್ಷೆ ದ್ರೌಪದಿ ಮುರ್ಮು ಶುಕ್ರವಾರ ಸಹಿ ಹಾಕಿದರು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇತ್ತೀಚೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಂ ಅನ್ನು ಪರಿಚಯಿಸಿದ್ದರು.

ಸೆಪ್ಟೆಂಬರ್ 19 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಸೆಪ್ಟೆಂಬರ್ 21 ರಂದು ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ಆದರೆ, ಉಭಯ ಸದನಗಳಲ್ಲಿ ಯಶಸ್ವಿಯಾಗಿ ಅಂಗೀಕಾರಗೊಂಡ ಈ ನಾರಿ ಸರ್ತಿ ವಂದನ್ ಅಧಿನಿಯಂ ವಿಧೇಯಕ ರಾಷ್ಟ್ರಪತಿಯವರನ್ನು ತಲುಪಿತು.
ರಾಷ್ಟ್ರಪತಿಗಳೂ ಅನುಮೋದನೆ ನೀಡಿದ್ದರಿಂದ ಸುಮಾರು 3 ದಶಕಗಳ ಕಾಲ ನೆನೆಗುದಿಗೆ ಬಿದ್ದಿದ್ದ ಮೀಸಲಾತಿ ಮಸೂದೆಗೆ ತೆರೆ ಬಿದ್ದಿದೆ. ಆದರೆ ಮುಂಬರುವ ಚುನಾವಣೆಯಲ್ಲಿ ಈ ಮಹಿಳಾ ಮೀಸಲಾತಿ ಕಾನೂನು ಜಾರಿಯಾಗುವ ಸಾಧ್ಯತೆ ಕಡಿಮೆ. ಏಕೆಂದರೆ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಸೂದೆ ಮೇಲಿನ ಚರ್ಚೆಯ ವೇಳೆ ಲೋಕಸಭೆಗೆ ತಿಳಿಸಿದರು.

1996ರಲ್ಲಿ ಅಂದಿನ ಪ್ರಧಾನಿ ಹೆಚ್‌.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ ರಂಗ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯ ಮುಂದೆ ಮೊದಲ ಬಾರಿಗೆ ತಂದಿತ್ತು. ಅದರ ನಂತರ, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಸರ್ಕಾರಗಳ ಅವಧಿಯಲ್ಲಿ ಮಸೂದೆಯನ್ನು ಮಂಡಿಸಲಾಯಿತು, ಆದರೆ ಈ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರವನ್ನು ಪಡೆದಿರಲಿಲ್ಲ. ಅಂತಿಮವಾಗಿ ಮಹಿಳಾ ಮೀಸಲಾತಿ ಮಸೂದೆಗೆ 2010ರಲ್ಲಿ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತರೂ ಲೋಕಸಭೆಯಲ್ಲಿ ಅದು ಬಾಕಿ ಉಳಿದಿತ್ತು. 2014ರಲ್ಲಿ ಆಗಿನ ಲೋಕಸಭೆಯನ್ನು ವಿಸರ್ಜಿಸಿದಾಗ ಮಸೂದೆ ಅಲ್ಲೇ ಕುಸಿದಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಬಿಗಿ ಕ್ರಮ: ಶಾಲಾ ಅವಧಿಯಲ್ಲಿ ಶಿಕ್ಷಕರಿಗೆ ತರಬೇತಿ, ಸಭೆ ಹಾಗೂ ಡೇಟಾ ಎಂಟ್ರಿ ಕಡ್ಡಾಯ ನಿಷೇಧ!

SIR : ಬಿಎಲ್‌ ಒಗಳು ಕಡ್ಡಾಯವಾಗಿ ಮತದಾರರ ಮನೆಗೆ ಭೇಟಿ ನೀಡಿ ಫಾರಂ ವಿತರಿಸಬೇಕು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಆದೇಶ

ಪೋಷಕರೇ ಹುಷಾರ್‌! ಮಕ್ಕಳ ಜ್ವರ, ಕೆಮ್ಮಿಗೆ ನಿಮ್ಮ ಮಾತ್ರೆಗಳನ್ನು ಅರ್ಧ ಕತ್ತರಿಸಿ ನೀಡುತ್ತಿದ್ದೀರಾ? ಜೀವಕ್ಕೇ ಬರಬಹುದು ಅಪಾಯ!

BREAKING NEWS :ಪಾಕಿಸ್ತಾನದಲ್ಲಿ ಕಂದಕಕ್ಕೆ ಉರುಳಿದ ಅತಿವೇಗದ ಬಸ್;  40 ಪ್ರಯಾಣಿಕರು ಸಾವು!

ಕೇಂದ್ರ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಅಕ್ಕಿಯ ಗುಣಮಟ್ಟ ಹೆಚ್ಚಳಕ್ಕೆ ನಿರ್ಧಾರ

ಭಾರತದಲ್ಲಿ ಶೇ 72.8 ರಷ್ಟು ಪುರುಷರ ಆತ್ಮಹತ್ಯೆ: ಸದ್ದಿಲ್ಲದೆ ಆವರಿಸುತ್ತಿರುವ ಮಾನಸಿಕ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ತಜ್ಞರ ಆತಂಕ!

Leave a Comment