ನಗರಸಭೆಯಿಂದ ಕವಾಡಿಗರಹಟ್ಟಿ ದವಳಿಹೊಂಡದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ

0 Min Read

ಸುದ್ದಿಒನ್, ಚಿತ್ರದುರ್ಗ, ಸೆ.30 : ನಗರದ ಹೊರವಲಯದ ಕವಾಡಿಗರಹಟ್ಟಿ ಬಳಿಯ ದವಳಿ ಹೊಂಡದಲ್ಲಿ ಶನಿವಾರ ನಗರಸಭೆ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಪುರಾತನ ಕಾಲದ ಪುಷ್ಕರಣಿಯಲ್ಲಿ
ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅಭಿಯಾನ ಕಾರ್ಯರೂಪಕ್ಕೆ ತರಲಾಯಿತು. ಇದಕ್ಕೂ ಮೊದಲು  ಸ್ವಚ್ಛತೆಯ ಬಗ್ಗೆ ಪೌರಾಯುಕ್ತರಾದ ಶ್ರೀಮತಿ ಎಂ. ರೇಣುಕಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ತಿಳುವಳಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಜಯಪ್ಪ, ಆರೋಗ್ಯ ನಿರೀಕ್ಷಕರಾದ ನಾಗರಾಜ್,  ನೈರ್ಮಲ್ಯ ಮೇಲ್ವಿಚಾರಕರಾದ ರವಿಚಂದ್ರು, ನಗರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಪ್ರಿಯದರ್ಶಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *