ಚಿತ್ರದುರ್ಗ,ಸೆ.30: ನಗರದ ಹೊಳಲ್ಕೆರೆ ರಸ್ತೆಯಲ್ಲಿ ನೆಲೆಸಿರುವ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಇದೇ ಸೆ.29 ರಿಂದ ಪ್ರಾರಂಭಗೊಂಡಿದ್ದು, ಅ.05 ರವರೆಗೆ ನಡೆಯಲಿದೆ.
ಜಾತ್ರೋತ್ಸವ ನಿಮಿತ್ತ ಶ್ರೀ ಗೌರಸಂದ್ರ ಮಾರಮ್ಮ ದೇವಿಗೆ
ಸೆಪ್ಟೆಂಬರ್ 29 ರ ಶುಕ್ರವಾರ ಮದುವಣಗಿತ್ತಿ ಶಾಸ್ತ್ರ ನೆರವೇರಿಸಲಾಗಿದ್ದು,
ಅ.02 ರ ಸೋಮವಾರ ರಾತ್ರಿ 11 ಗಂಟೆಗೆ ಚಂದ್ರವಳ್ಳಿ ಕೆರೆಯಲ್ಲಿ ಹೊಳೆ ಪೂಜೆ ನೆರವೇರಲಿದೆ.
ಅಕ್ಟೋಬರ್ 03 ರ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ವರೆಗೆ ಹಿಟ್ಟಿನ ಆರತಿ ಹಾಗೂ ಬೇವಿನ ಸೀರೆ,
ಅಕ್ಟೋಬರ್ 04 ರ ಬುಧವಾರ ರಾತ್ರಿ 8 ಗಂಟೆಗೆ ಅಗ್ನಿಕುಂಡ ನೆರವೇರಲಿದೆ.
ಅಕ್ಟೋಬರ್ 05 ರ ಗುರುವಾರ ಬೆಳಗ್ಗೆ 11 ಗಂಟೆಗೆ ಓಕಳಿ ಮತ್ತು ಶ್ರೀ ಗೌರಸಂದ್ರ ಮಾರಮ್ಮ ದೇವಿಯು ರಾಜ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮುರುಘರಾಜೇಂದ್ರ ಮಠಕ್ಕೆ ತೆರಳಿ ನಂತರ ರಾತ್ರಿ 11 ಗಂಟೆಗೆ ಗರ್ಭಗುಡಿ ಪ್ರವೇಶ ಮಾಡಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಅರ್ಚಕರಾದ ಓಬಳೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













