ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.01 : ದೇಶದ ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬದ ಅಂಗವಾಗಿ ನಡೆದ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ಬಿಜೆಪಿ ನಗರ ಘಟಕದಿಂದ ಭಾನುವಾರ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
35 ನೇ ವಾರ್ಡಿನ ಐ.ಯು.ಡಿ.ಪಿ. ಬಡಾವಣೆಯಲ್ಲಿರುವ ಗಣಪತಿ ದೇವಸ್ಥಾನದ ಉದ್ಯಾನವನದಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಪ್ರಧಾನಿ ನರೇಂದ್ರಮೋದಿರವರು ಸ್ವಚ್ಚ ಅಭಿಯಾನಕ್ಕೆ ಚಾಲನೆ ನೀಡಿರುವುದರಿಂದ ಅವರ ಜನ್ಮದಿನದ ಪ್ರಯುಕ್ತ ಸೇವಾಪಾಕ್ಷಿಕ ಅಡಿ ರಕ್ತದಾನ ಶಿಬಿರ, ಗಿಡನೆಡುವುದು, ಉಚಿತ ಆರೋಗ್ಯ ತಪಾಸಣೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ನಗರದ 35 ವಾರ್ಡ್‍ಗಳಲ್ಲಿಯೂ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಉಪಾಧ್ಯಕ್ಷ ಸಂಪತ್‍ಕುಮಾರ್, ಶ್ಯಾಮಣ್ಣ, ಶಿವಪ್ರಕಾಶ್, ಮಾಧುರಿ ಗಿರೀಶ್, ನಾಗರಾಜ್‍ಬೇದ್ರೆ, ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್, ಹರೀಶ್, ಬಿಜೆಪಿ. ಮುಖಂಡರುಗಳಾದ ತಿಮ್ಮಣ್ಣ, ರವಿಕುಮಾರ್, ರಮೇಶ್‍ಆಚಾರ್, ಬಸಮ್ಮ, ಚಂದ್ರು, ರಾಮು, ಅರುಣಕುಮಾರಿ, ಕಿರಣ್, ಶಂಭು ಇನ್ನು ಮುಂತಾದವರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















