Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ಇನ್ನು 144 ಸೆಕ್ಷನ್ ಮುಂದುವರಿಕೆ : ಹೇಗಿದೆ ರಾಗಿಗುಡ್ಡದಲ್ಲಿನ ಪರಿಸ್ಥಿತಿ..?

---Advertisement---

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದು ಶಿವಮೊಗ್ಗದಲ್ಲಿ ಭಯದ ಆತಂಕ ನಿರ್ಮಾಣವಾಗಿತ್ತು. ಸದ್ಯಕ್ಕೆ ಪರಿಸ್ಥಿತಿ ಸರಿ ಆಗಿದೆ. ಪೊಲೀಸರು ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಹಲವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಸದ್ಯಕ್ಕೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಸರಿ ಇದೆ ಎನ್ನುವಾಗಲೇ ಮತ್ತೆ 144 ಸೆಕ್ಷನ್ ಮುಂದುವರೆದಿದೆ.

 

ಕಳೆದ ನಾಲ್ಕು ದಿನದಿಂದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಶಿವಮೊಗ್ಗದ ಪೊಲೀಸರು ಕೂಡ ಹೈಅಲರ್ಟ್ ಆಗಿದ್ದಾರೆ. ಯಾವುದೇ ಅನಾಹುತ ನಡೆಯದಂತೆ ಪೊಲೀಸರು ಕಾವಲಿಗಿದ್ದಾರೆ. 144‌ ಸೆಕ್ಷನ್ ಹಾಕಿದ್ದು, ಕಟ್ಟು ನಿಟ್ಟಿನ ನಿಗಾ ವಹಿಸಿದ್ದಾರೆ.

ಈ ಸಂಬಂಧ ಮಾತಮಾಡಿದ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ರಾಗಿಗುಡ್ಡದಲ್ಲಿ ಶಾಂತಿಯಿದೆ, ಭಯಪಡಬೇಡಿ. ಅಂಗಡಿ-ಮುಂಗಟ್ಟು ತೆರೆದು ವ್ಯಾಪಾರ ಆರಂಭಿಸಿ. ಯಾರೂ ವದಂತಿಗಳಿಗೆ ಕಿವಿಗೊಡಬೇಡಿ. ಅನಾವಶ್ಯಕವಾಗಿ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment