ಉತ್ತರಪ್ರದೇಶ: ಚುನಾವಣಾ ಕಣ ದಿನದಿಂದಕ್ಕೆ ಕಾವೇರ್ತಾ ಇದೆ. ರಾಜಕೀಯ ಪಕ್ಷದವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರಪ್ರದೇಶದಲ್ಲಿ ಜೋರು ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಅಲ್ಲಿನ ಜನರಿಗೆ ಆಶ್ವಾಸನೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನ ಅಧಿಕಾರಕ್ಕೆ ತಂದರೆ ಅನಾರೋಗ್ಯಪೀಡಿತರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ನೀಡೋದಾಗಿ ಪ್ರಿಯಾಂಕ ಭರವಸೆ ನೀಡಿದ್ದಾರೆ.
ಇನ್ನಷ್ಟು ವಿವಿಧ ಆರೋಗ್ಯದ ಯೋಜನೆಗಳನ್ನ ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಜನರನ್ನ ನಿರ್ಲಕ್ಷ್ಯ ಮಾಡಿದೆ. ರಾಜ್ಯದಲ್ಲಿನ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ಗದ ದತದಲ್ಲಿ ಜನರಿಗೆ ಉಚಿತ ಚಿಕಿತ್ಸೆ ನೀಡೋದಾಗಿ ಪ್ರಿಯಾಂಕ ಗಾಂಧಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.