ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ : ಕಾರ್ಯಕ್ರಮಗಳ ವಿವರ ಇಲ್ಲಿದೆ…!

1 Min Read

ಚಿತ್ರದುರ್ಗ ಅ. 05 : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 06 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

ನಂತರ ಇಲ್ಲಿನ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬೆ. 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2.40 ಗಂಟೆಗೆ ಹಿರಿಯೂರಿಗೆ ತೆರಳಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಆಯೋಜಿಸಿರುವ “ಕನಕ ಸಮುದಾಯ ಭವನ” ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸುವರು.

ಮಧ್ಯಾಹ್ನ 3.10 ಗಂಟೆಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *