Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಸಚಿವ ಈಶ್ವರ ಬಿ.ಖಂಡ್ರೆ ಮತ್ತು ಸಚಿವ ಎನ್.ಚಲುವರಾಯಸ್ವಾಮಿ ಜಿಲ್ಲಾ ಪ್ರವಾಸ

---Advertisement---

ಚಿತ್ರದುರ್ಗ, ಅ.05:  ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇದೇ ಅಕ್ಟೋಬರ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 10ಕ್ಕೆ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.

ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದೇ ಅಕ್ಟೋಬರ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಜೊತೆಯಲ್ಲಿ ಸಚಿವರು ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3.10ಕ್ಕೆ ಮುಖ್ಯಮಂತ್ರಿಗಳ ಜೊತೆಯಲ್ಲಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment