Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಚಿತ್ರದುರ್ಗ, ಅಕ್ಟೋಬರ್.06 : ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗ್ಯಾರಂಟಿಗಳಿಗಾಗಿ ರಾಜ್ಯದ  ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು  ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ.  ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ ಎಂದರು, ಕಾಂಗ್ರೆಸ್  ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ.

ನಿಯಮಿತ ಅನುದಾನ ದೊರೆಯುತ್ತಿದೆ ಎಂದರು. ಭದ್ರಾ ಯೋಜನೆಗೆ  200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ.  ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ  ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು  ಸ್ಪಷ್ಪಡಿಸಿದರು.

ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? :

ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಸತ್ಯ ಶೋಧನೆ ಮಾಡಲು ಏನಾಗಿದೆ ಎಂದು ಪ್ರಶ್ನಿಸಿದರು. ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ,  ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ  ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ  ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment