Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ ₹ 40,29,072  ಲಕ್ಷ ಸಂಗ್ರಹ

Facebook
Twitter
Telegram
WhatsApp

ಸುದ್ದಿಒನ್, ನಾಯಕನಹಟ್ಟಿ, ಅಕ್ಟೋಬರ್.06 : ಇತಿಹಾಸಿಕ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆ ಮತ್ತು ಕೆನರಾ ಬ್ಯಾಂಕ್ ಸಿಬ್ಬಂದಿಗಳು ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು.

ಮೊದಲು ಹೂರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ತಾಲೂಕು ಕಚೇರಿ ಹಾಗೂ ದೇವಾಲಯ ಕಾರ್ಯನಿರ್ವಾಣ ಅಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಶುರುವಾದ ಎಣಿಕೆ ಕಾರ್ಯ ಮಧ್ಯಾಹ್ನ 12 ಗಂಟೆಗೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಸಂಜೆ 6 ಕ್ಕೆ ಮುಕ್ತಾಯವಾಯಿತು.

ಹೊರಮಠದಲ್ಲಿ ₹6,62,132 ಲಕ್ಷ,  ಒಳಮಠದಲ್ಲಿ ₹. 30,94,200 ಲಕ್ಷ,  ದೇವಾಲಯದ ದಾಸೋಹ ₹2,72,740, ಮಂದಿರದ ಹುಂಡಿಯಲ್ಲಿ ಒಟ್ಟು ಸಂಗ್ರಹವಾದ ₹ 40,29,072 ಲಕ್ಷ ಸಂಗ್ರಹವಾಗಿದೆ.

ವರಮಠ ಮತ್ತು ಒಳ ಮಠ ಹುಂಡಿಯಲ್ಲಿ ಕೆಲವು ಬೆಳ್ಳಿ ನಾಣ್ಯಗಳು ಬೆಳ್ಳಿ ತೊಟ್ಟಿಲುಗಳು ಬೆಳ್ಳಿ ಆಭರಣಗಳು ಸಿಕ್ಕಿದ್ದು ವಿಶೇಷವಾಗಿತ್ತು. ಇನ್ನು ಇದೇ ವೇಳೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್. ಗಂಗಾಧರಪ್ಪ ಮಾತನಾಡಿ ಮಾನ್ಯ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಅವರ ಆದೇಶದ ಮೇರೆಗೆ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ದೇವಸ್ಥಾನದ ಹುಂಡಿ ಎಣಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯ ನಿರ್ವಾಣ ಅಧಿಕಾರಿ ಎಚ್ ಗಂಗಾಧರಪ್ಪ,  ದೇವಸ್ಥಾನ ಸಿಬ್ಬಂದಿಗಳಾದ ಎಸ್. ಸತೀಶ್, ಮನು, ನಾಡಕಚೇರಿ ಉಪ ತಹಶೀಲ್ದಾರ್ ಬಿ. ಶಕುಂತಲಾ, ಆರ್. ಐ. ಚೇತನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ, ಜಗದೀಶ್ ಶಂಕರ್, ಪುಷ್ಪಲತಾ, ಶರಣಬಸಪ್ಪ,  ಜೈರಾಮ್, ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ರಾಮ್ ಮೋಹನ್, ಮತ್ತು ಸಿಬ್ಬಂದಿಗಳು, ಗ್ರಾಮ ಸಹಾಯಕರಾದ ಚನ್ನಬಸಪ್ಪ,ಓಬಣ್ಣ, ಹರೀಶ್, ಹೇಮಂತ್ ನಾಯ್ಕ, ಕುಮಾರ್, ನಾಗರಾಜ್, ಮುಂತಾದವರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!