Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

20 ಸಾವಿರ ಕೋಟಿ ವಹಿವಾಟಿನೊಂದಿಗೆ ನಂದಿನಿ ಹಾಲಿನ ಒಕ್ಕೂಟ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ : ಎಸ್.ಜಿ.ಶೇಖರ್

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ, (ಆ.06) :  ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಪೈಪೋಟೆಯನ್ನು ಎದುರಿಸಬೇಕಾದ ಸಂದರ್ಭದಲ್ಲಿ ಯಾವುದೇ ಒಂದು ಕ್ಷೇತ್ರದಲ್ಲಿಯಾಗಲೀ ಉದಾರೀಕರಣ, ಖಾಸಗೀಕರಣ ಮತ್ತು ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ನಮ್ಮ ಹೈನೋದ್ಯಮದಲ್ಲಿ ಹೆಚ್ಚು ಸ್ಪರ್ಧೆಯನ್ನು ಎದುರಿಸಬೇಕಾದರೆ ಹಾಲಿನ ಗುಣಮಟ್ಟ, ಹೆಚ್ಚು ಹಾಲಿನ ಉತ್ಪನ್ನ ಮಾಡಬೇಕಾಗಿದೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ತಿಳಿಸಿದರು.

ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಚಿತ್ರದುರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಿ.ಎಲ್.ಗೌಡ ಲೇಔಟ್, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ.ಸಹಕಾರ ಭವನ ಹಮ್ಮಿಕೊಳ್ಳಲಾಗಿದ್ದ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕುಗಳಲ್ಲಿ ಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ರಾಜ್ಯದಲ್ಲಿ ಶಿವಮೊಗ್ಗ ಹಾಲು ಒಕ್ಕೂಟವು ಕಳೆದ ತಿಂಗಳು 23 ರಂದು 7 ಲಕ್ಷ 802 ಕೆ.ಜಿ ಹಾಲು ಶೇಖರಣೆ ಹಾಲು ಉತ್ಪಾದನೆಯ ದಾಖಲೆ ಮಾಡಿದೆ ರಾಜ್ಯದಲ್ಲಿ 15 ಒಕ್ಕೂಟಗಳಲ್ಲಿ ಶಿವಮೊಗ್ಗ ಹಾಲು ಒಕ್ಕೂಟಗಳಲ್ಲಿ ಅತ್ಯುತ್ತಮ ಹಾಲಿನ ಗುಣಮಟ್ಟ ಹೊಂದಿದೆ. 98.53 ಹಾಲಿನ ಗುಣಮಟ್ಟ ಹೊಂದಿದ್ದು, ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಅತೀ ಹೆಚ್ಚು ದರವನ್ನು ಕೊಡುತ್ತಿರುವ, ರಾಜ್ಯದ 15 ಹಾಲು ಒಕ್ಕೂಟಗಳಲ್ಲಿ ಶಿವಮೊಗ್ಗ ಹಾಲು ಒಕ್ಕೂಟ ಸ್ಪರ್ಧಾತ್ಮಕವಾದ ದರವನ್ನು ಕೊಡುತ್ತಿದೆ. ಈ ಸಾಧನೆಗೆ ನಮ್ಮ ಸೇವೆ ಬಹಳ ಮುಖ್ಯ ಎಂದು ತಿಳಿಸಿದರು.

ನಮ್ಮ ನಂದಿನಿ ಬ್ರಾಂಡ್‌ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. 20 ಸಾವಿರ ಕೋಟಿ ವಹಿವಾಟು ಮಾಡುತ್ತಿದೆ ಎಂದು ತಿಳಿಸಿ ಇದೇ ರೀತಿ ಸಹಕಾರ ಸಂಘಗಳಲ್ಲಿ ತಿದ್ದುಪಡಿಯಾದ ಕಾನೂನುಗಳ ಬಗ್ಗೆ, ಚುನಾವಣೆ ನಡೆಸುವ ಬಗ್ಗೆ ಹಾಲು ಉತ್ಪಾದಕರ ತಿಳುವಳಿಕೆ ಪಡೆಯುವುದು ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ತರಬೇತಿ ಶಿಬಿರವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ನಿರ್ದೇಶಕರು, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಇದರ ನಿರ್ದೇಶಕರು, ಆರ್. ರಾಮರೆಡ್ಡಿ, ಸಂಘಗಳ ಕಾರ್ಯದರ್ಶಿಗಳು ಲಾಭದಲ್ಲಿರುವ ಸಂಘಗಳಿಂದ ಸಹಕಾರ ಶಿಕ್ಷಣ ನಿಧಿಯನ್ನು ನೀಡಬೇಕು, ಶಿಕ್ಷಣ ನಿಧಿ ನೀಡಿದರೆ ಇನ್ನೂ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಏರ್ಪಡಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಯೂನಿಯನ್ನಿನ ಉಪಾಧ್ಯಕ್ಷರಾದ  ಮಾತೃಶ್ರೀ ಎನ್, ಮಂಜುನಾಥ್  ಮಾತನಾಡಿ ರೈತರಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಹಾಲು ಉತ್ಪಾದನೆಗೆ ತಾವುಗಳು ಕಾಳಜಿ ವಹಿಸಿ ಶ್ರಮಪಟ್ಟು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಸಹಕಾರ ರತ್ನ ಪುರಸ್ಕೃತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೆಶಕ ಜಿಂಕಲು ಬಸವರಾಜ್, ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಸಹಕಾರ ತತ್ವಗಳನ್ನು ಅಳವಡಿಸಿಕೊಂಡು ಗ್ರಾಮೀಣ ಬದುಕನ್ನು ಉತ್ತಮವಾಗಿ ಬದಲಾವಣೆಗೊಳಿಸುತ್ತಿರುವುದರಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಇದೇ ರೀತಿ ಯಾವುದೇ ಲೋಪದೋಷವಾಗದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಯೂನಿಯನ್ನಿನ ಅಧ್ಯಕ್ಷರಾದ  ಜೆ.ಶಿವಪ್ರಕಾಶ್ ನಮ್ಮ ಯೂನಿಯನ್ ಇಂತಹ ತರಬೇತಿಗಳನ್ನು ನಿರಂತರವಾಗಿ ನೀಡುತ್ತದೆ. ತಾವು ತಮ್ಮ ಸಂಘದ ಲಾಭದಲ್ಲಿ ನಮ್ಮ ಯೂನಿಯನ್‍ಗೆ ನೀಡುವ 2 % ಸಹಕಾರ ಶಿಕ್ಷಣ ನಿಧಿಯು ಸದುಪಯೋಗವಾಗಬೇಕೆಂದರೆ, ಸಹಕಾರ ಸಂಘಗಳು ಇನ್ನೂ ಹೆಚ್ಚು ಅಭಿವೃದ್ಧಿ ಹೊಂದಬೇಕಾದರೆ ಇಂತಹ ತರಬೇತಿಗಳಲ್ಲಿ ಭಾಗವಹಿಸಿ, ಇಂತಹ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ವ್ಯವಸ್ಥಾಪಕರಾದ  ಎಸ್.ಎಂ.ಮೂರ್ತಿ, ಶಿವಮೊಗ್ಗ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ  ಕೆ.ಪಿ.ಸಂಜಯ್, ಶಿವಮೊಗ್ಗ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಗಳಾದ  ವಿನೂತ್ ಕುಮಾರ್, ರವಿಚಂದ್ರ ಜಿ.,  ನಯಾಜ್ ಬೇಗ್ ಎಸ್. ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಈ ತರಬೇತಿಗೆ ಉಪನ್ಯಾಸಕರಾಗಿ ವಿ.ಜಿ.ಕುಲಕರ್ಣಿ, ಸಹಕಾರ ಅಭಿವೃದ್ಧಿ ಅಧಿಕಾರಿಗಳು, ಧಾರವಾಡ, ಇವರು ಸಹಕಾರ ಸಂಘಗಳಲ್ಲಿ ಇತ್ತೀಚೆಗೆ ತಿದ್ದುಪಡಿಯಾದ ಕಾಯ್ದೆ, ಕಾನೂನು ಮುಖ್ಯಾಂಶಗಳು, ಸಹಕಾರ ಸಂಘಗಳಲ್ಲಿ ಸಭೆಯನ್ನು ನಡೆಸುವ ವಿಧಾನಗಳು ಮತ್ತು ಚುನಾವಣೆ ಜರುಗಿಸುವ ಕುರಿತು ಹಾಗೂ ಸಹಕಾರ ಸಂಘಗಳಲ್ಲಿ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.

ರೈತಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡು, ಜಿಲ್ಲಾ ಸಹಕಾರ ಶಿಕ್ಷಕ ನಾಗರಾಜ್ ಪಾಟೀಲ್, ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!