Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದ್ವೇಷ ಭಾಷಣ ಆರೋಪ : ಸಿದ್ದಲಿಂಗ ಸ್ವಾಮಿ ವಿರುದ್ಧ ದೂರು ದಾಖಲು..!

---Advertisement---

ಗಣೇಶ ವಿಸರ್ಜನೆ ವೇಳೆ ದ್ವೇಷ ಭಾಷಣ‌ಮಾಡಿದ ಆರೋಪದ‌ ಮೇಲೆ ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ.

‘ಶಿವಮೊಗ್ಗದಲ್ಲಿ ನಡೆದ ಈದ್ ಮಿಲಾದ್ ಗಲಾಟೆಯಲ್ಲಿ ಮುಸ್ಲಿಮರು ಹಿಂಸಾಚಾರ ನಡೆಸಿದ್ದಾರೆ. ನಾವೂ ಮುಸ್ಲಿಮರ ಮೇಲೆ ದಾಳಿ ಮಾಡುತ್ತೇವೆ. ಮತ್ತೊಂದು ಗೋದ್ರಾ ಗಲಾಟೆಯಾಗುತ್ತದೆ’ ಎಂದು ದ್ವೇಷ ಭಾಷಣ ಮಾಡಿದ್ದಾರೆ. ಇದೊಂದೆ‌ ಬಾರಿ‌ ಅಲ್ಲ ಸಿದ್ದಲಿಂಗ ಸ್ವಾಮಿ‌ ಈ ಹಿಂದೆಯೂ ದ್ವೇಷ ಭಾಷಣ ಮಾಡಿದ್ದರು. 2020 ರಲ್ಲಿ ಮಾತನಾಡಿದ್ದ ಅವರು, ಮೋದಿ ಮತ್ತು ಅಮಿತ್ ಶಾ ಅವರನ್ನು ವಿರೋಧಿಸುವ ಜನರು, ಗೌರಿ‌ ಲಂಕೇಶ್ ರೀತಿ ಬಲಂಥೀಯ ಉಗ್ರಗಾಮಿಗಳ ಗುಂಡಿಗೆ ಬಲಿಯಾಗುತ್ತಾರೆ ಎಂದು ಹೇಳಿದ್ದರು. ಇದೀಗ ಶಿವಮೊಗ್ಗ ಘಟನೆಯ ಬಗ್ಗೆ ಮಾತನಾಡಿದ್ದಾರೆ.

ಅವರ ಭಾಷಣದ ವಿಡಿಯೋವನ್ನು ಆಧರಿಸಿ ಶಹಾಪುರ ಪೊಲೀಸರು ಸಿದ್ದಲಿಂಗ ಸ್ವಾಮಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು) ಮತ್ತು 153ಎ (ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment