Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ವಿವಿ: ವಿಚಾರ ಸಂಕಿರಣದಿಂದ ಭವಿಷ್ಯದ ಜ್ಞಾನವೃದ್ಧಿಗೆ ಪೂರಕ: ಡಾ.ಎಂ.ಗೋವಿಂದರಾಜು ಅಭಿಮತ

---Advertisement---

 

ಬೆಂಗಳೂರು: ಅ,07: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿದ್ಧ “ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು” ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್‌ ಶ್ರೀ ಎಸ್. ಸಿದ್ದಯ್ಯ ಇವರುಗಳಿಂದ ವಿವಿಧ ದೃಷ್ಟಿಕೋನಗಳ ಮೂಲಕ ವಿವಿಧ ಆಯಾಮ ಹಾಗೂ ಪ್ರಚಲಿತ ವಸ್ತುಸ್ಥಿತಿಯ ಬಗ್ಗೆ ವಿಸ್ತಾರವಾಗಿ ವಿಚಾರ ಮಂಡನೆ ಮಾಡಿದರು.

ತದನಂತರದಲ್ಲಿ ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ರವರು ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ವಿಷಯದಲ್ಲಿ ವಿಚಾರ ಸಂಕಿರಣಗಳು ಬಹುದೊಡ್ಡ ಪಾತ್ರ ನಿರ್ವಹಿಸುತ್ತವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಕೊನೆಯಲ್ಲಿ ಹಲವು ವಿಚಾರಗಳ ಬಗ್ಗೆ ಸಾಕಷ್ಟು ಮಾಹಿತಿ ವಿನಿಮಯವಾಯಿತ್ತು.

ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಪ್ರೊ.ಟಿ.ರಾಜೇಂದ್ರ ಪ್ರಸಾದ್, ಡಾ. ರಾಣಿ ಮೇಡಂ, ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಉಪನ್ಯಾಸಕ ಡಾ. ಚಂದ್ರಶೇಖರ್, ಡಾ. ಪ್ರಕಾಶ್, ಎಸ್.ಎನ್, ಡಾ. ರಜನಿಕಾಂತ್, ಡಾ. ಪ್ರಕಾಶ್ ಡಿ.ಸಿ, ಸಂಶೋಧನಾರ್ಥಿ ಈಶ್ವರ್ ಸಿರಿಗೇರಿ, ಶ್ರೀಗುರುರಾಘವೇಂದ್ರ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಮತ್ತು ಭೊಧಕೇತರ ಸಿಬ್ಬಂದಿ ವರ್ಗ, ಮತ್ತಿತರರು ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...