Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪನವರ ಕಣ್ಣೀರೇ ಬಿಜೆಪಿಗೆ ಸೋಲು : ರೇಣುಕಾಚಾರ್ಯ

---Advertisement---

 

ಶಿವಮೊಗ್ಗ: ಮಾಜಿ ಸಚಿವ ರೇಣುಕಾಚಾರ್ಯ ಆಗಾಗ ಯಡಿಯೂರಪ್ಪ ಅವರ ಪರ ಯಾವಾಗಲೂ ಬ್ಯಾಟ್ ಬೀಡುತ್ತಾ ಇರುತ್ತಾರೆ. ಇದೀಗ ಮತ್ತೊಮ್ಮೆ ಯಡಿಯೂರಪ್ಪ ಅವರ ವಿಚಾರವಾಗಿ ಮಾತನಾಡಿದ್ದಾರೆ. ಅವರ ಕಣ್ಣೀರೆ ಇಂದು ಬಿಜೆಪಿಗೆ ಸೋಲಾಗಿದೆ ಎಂದಿದ್ದಾರೆ. ಜೊತೆಗೆ ಬಿಜೆಪಿಗೆ ನಿಮ್ಮ ಕೊಡುಗೆ ಏನು ಎಂಬ ಪ್ರಶ್ನೆಯನ್ನು ಮಾಡಿದ್ದಾರೆ. ಅದನ್ನು ಪರೋಕ್ಷವಾಗಿ ಬಿ ಎಲ್ ಸಂತೊಷ್ ಅವರಿಗೆ ಕೇಳಿದ್ದಾರೆ ಎನ್ನಲಾಗಿದೆ.

ಬಿಎಸ್ ಯಡಿಯೂರಪ್ಪ ಅವರು ಬಸ್, ಕಾರು, ಸೈಕಲ್ ಮೂಲಕ ಊರುರು ಸುತ್ತಿ ಪಕ್ಷ ಸಂಘಟನೆ ಮಾಡಿದ್ದಾರೆ. 2005-06 ರಲ್ಲಿ ಬಿಜೆಪಿ ಕಚೇರಿಗೆ ಬಂದು ಪಕ್ಷ ನಿತಂತ್ರಿಸುತ್ತಿದ್ದೀರಿ..? ಬಿಜೆಪಿಗೆ ನಿಮ್ಮ ಕೊಡುಗೆ ಏನು..? ನೀವೇನು ಪಕ್ಷ ಕಟ್ಟಿ ಬೆಳೆಸಿದ್ದೀರಾ..? ಜೈಲಿಗೆ ಎಷ್ಟು ಬಾರಿ ಹೋಗಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯವಾಗಿ ಯಡಿಯೂರಪ್ಪ ಅವರನ್ನು ಮುಗಿಸಿದರಲ್ಲ. ಈಗ ನಾಯಕತ್ವ ಎಲ್ಲಿದೆ. ಆತ್ಮವಲೋಕನ ಮಾಡಿಕೊಳ್ಳಿ. ರಟಜಕಾರಣದಲ್ಲಿ ಯಾವತ್ತು ಸರ್ವಾಧಿಕಾರಿ ಧೋರಣೆ ಮಾಡಬೇಡಿ ಎಂದಿದ್ದಾರೆ.

ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನ ನಿರ್ಲಕ್ಷ್ಯ ಮಾಡಿದರೆ‌ಬಿಜೆಪಿ ಇನ್ನಷ್ಟು ನೆಲಕಚ್ಚಲಿದೆ. ನೀವೂ ಒಂದು ಗ್ರಾಮವನ್ನು ಗೆಲ್ಲುವುದಕ್ಕೆ ಆಗಲ್ಲ. ಕರ್ನಾಟಕ ಕೋರ್‌ಕಮಿಟಿಯಲ್ಲಿ ನಿರ್ಧಾರ ಆಗುವುದೇ ಒಂದು ದೆಹಲಿಗೆ ಹೋದಾಗ ನಿರ್ಧಾರ ಆಗುವುದೇ ಇನ್ನೊಂದು. ದೆಹಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಹೋದಾಗ ಬಹಳ ಸುಲಭವಾಗಿ ಭೇಟಿಗೆ ಅವಕಾಶ ಸಿಗುತ್ತದೆ. ಆದರೆ ನಮ್ಮ ನಾಯಕರಾದ ಯಡಿಯೂರಪ್ಪ ಅವರು ಹೋದಾಗ ಯಾವ ರೀತಿ ನಡೆಸಿಕೊಂಡರು ಎಂಬುದು ಗೊತ್ತಿದೆ. ಬಿಜೆಪಿ ಪಕ್ಷಕ್ಕಾಗಿ ಯಡಿಯೂರಪ್ಪ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಹೋರಾಟದ ಹಾದಿಯಿಂದ ಬಂದವರು ಅವರು, ಒಬ್ಬ ಶಿಲ್ಪಿಯಿದ್ದಂತೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment