ಬೀದರ್: ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಈ ವೇಳೆ ಮಾತನಾಡಿದ ಅವರು, ಕೇಂದ್ರ ಸಚಿವ ಭಗವಂತ್ ಖೂಬ ಹಾಗೂ ಸಚಿವ ಪ್ರಭು ಚೌಹ್ಹಾಣ್ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ಬೀದರ್ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಮಲ ಪತಾಕೆ ಹಾರಿಸಬೇಕು ಎಂದು ಸಚಿವ ನಾರಾಯಣಗೌಡ ಕರೆ ನೀಡಿದರು.
ಬಿಜೆಪಿಗೆ ಬಂದ ಮೇಲೆ ನನಗೆ ತೃಪ್ತಿ ಸಿಕ್ಕಿದೆ. ಜನಸೇವೆಯೇ ನನ್ನ ಮುಖ್ಯ ಗುರಿ, ತಾಯಿ ಆಸೆಯಂತೆಯೆ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಸಚಿವ ನಾರಾಯಣ ಗೌಡ ಅವರು ಹೇಳಿದರು.
ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಜವಾಬ್ದಾರಿಯನ್ನ ನೀಡಿದ್ದಾರೆ. ಕ್ರೀಡೆ ಒಂದು ಶಕ್ತಿಯನ್ನು ತುಂಬಬೇಕು ಎಂದು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ರೇಷ್ಮೆ ಬೆಳೆಗಾರರ ನೆರವಿಗೆ ನಮ್ಮ ಸರ್ಕಾರ ನಿಂತಿದೆ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಚರ್ಚಿಸಿ ಪರಿಹಾರ ಕೊಡಿಸಿದ್ದೇವೆ. ರೇಷ್ಮೆ ಇಲಾಖೆಯನ್ನು ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗ್ತಿದೆ ಎಂದು ಸಚಿವರು ತಿಳಿಸಿದರು.