Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ನಮ್ಮ ಸಮುದಾಯದ ವಿಷಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ : ಹಾಗಾಗಿ ಕಾಂಗ್ರೆಸ್ ಸೇರಲು ನಿರ್ಧಾರ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

---Advertisement---

 

ಸುದ್ದಿಒನ್, ಚಿತ್ರದುರ್ಗ : ವಿಧಾನಸಭೆ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದೆ. ಕಾಂಗ್ರೆಸ್ ಪಕ್ಷ ಸೇರಲು ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್  ಹೇಳಿದರು. ‌

ಬೆಂಗಳೂರಿನಲ್ಲಿ ಭಾನುವಾರ ಸಿಎಂ ಮತ್ತು ಡಿಸಿಎಂ ಭೇಟಿ ಬಳಿಕ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಹಿರಿಯೂರಿನಲ್ಲಿ ಮಂಗಳವಾರ ಸಮಾಜದ ಮುಖಂಡರ ಸಭೆ ಕರೆದಿದ್ದರು. ನಂತರ ಸಂಜೆ ವೇಳೆಗೆ ಚಿತ್ರದುರ್ಗದ ಯಾದವ ಗುರು ಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ಆಕ್ಟೋಬರ್ 20 ರಂದು ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಈ ವಿಚಾರವಾಗಿ ಸಮಾಜದ ಮುಖಂಡರ ಸಭೆ ಕರೆದು ಚರ್ಚೆ ನಡೆಸಲಾಯಿತು. ನಮ್ಮ ಸಮಾಜದ ಮತ್ತು ನಮ್ಮ ಕುಟುಂಬದ ಹಿತ ಬಯಸುವವರು ಕಾಂಗ್ರೆಸ್ ಗೆ ಆಹ್ವಾನಿಸಿದ್ದರು. ಡಿಕೆ ಶಿವಕುಮಾರ್ ಕೂಡಾ ಆಹ್ವಾನ ಮಾಡಿದ್ದರು. ಕಾಂಗ್ರೆಸ್ ಸೇರ್ಪಡೆ ಖಚಿತ ಎಂದರು. ಆದರೆ ನಾನು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ‌ ಎಂದು ಹೇಳಿದರು.

ಬಿಜೆಪಿಯಲ್ಲಿ ನಮಗೆ ಯಾವುದೇ ಅನ್ಯಾಯವಾಗಿಲ್ಲ. ಇಬ್ಬರು ಸಿಎಂ ಗಳು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಹಾಕರ ನೀಡಿದ್ದರು. ಹಿರಿಯೂರು ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ ಕೋಟ್ಯಾಂತರ ಅನುದಾನ ನೀಡಿದೆ. ಕೆಲಸ ಕೂಡಾ ಮಾಡಿರುವೆ. ನನಗೆ ಕಡೆ ಗಳಿಗೆಯಲ್ಲಿ ಮಂತ್ರಿಸ್ಥಾನ ತಪ್ಪಿಸಲಾಯಿತು.ಕಾಡುಗೊಲ್ಲ ಅಭಿವೃದ್ಧಿ ನಿಗಮ ವೇಳೆ ಗೊಂದಲ ಸೃಷ್ಠಿಸಿದರು. ನಮ್ಮನ್ನು ಗಣನೆಗೆ ತೆಗೆದುಕೊಂಡು ನಿಗಮ ಮಾಡಬೇಕಿತ್ತು. ಆದರೆ ಸಮುದಾಯದ ವಿಷಯದಲ್ಲಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಸಮುದಾಯ 25 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಇದೆ. ರಾಜಕೀಯ ಪ್ರಾತಿನಿಧ್ಯ ಮತ್ತು ಬೇರೆ ಸ್ಥಾನಮಾನ ವಿಷಯದಲ್ಲಿ ಗೊಂದಲ ಆಯ್ತು.
ಸಮಾಜದ ಮುಖಂಡರ ನಿರ್ಧಾರದಂತೆ ಪಕ್ಷ ಬದಲಾವಣೆ ಮಾಡುತ್ತಿದ್ದೇವೆ ಎಂದರು.

ಪತಿಗೆ MLC ಟಿಕೆಟ್ ನೀಡುತ್ತಾರೆ ಎಂದು ನಾನು ಕಾಂಗ್ರೆಸ್ಸಿಗೆ ಹೋಗಲ್ಲ. ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಗೆ ಕೆಪಿಸಿಸಿ ಅದ್ಯಕ್ಷರು ಈಗಾಗಲೇ ಪಕ್ಷದ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ನಾನು ಈ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಿಂದ ಸೋತಿರುವುದರಿಂದ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕೆ.ಆರ್.ಪುರಂ ಕ್ಷೇತ್ರ ಎಂದು ತೀರ್ಮಾನ ಮಾಡಿಲ್ಲ. ಮತ್ತು ಕಾಂಗ್ರೆಸ್ ಪಕ್ಷ ಸೇರಲು ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪತಿ ಡಿ.ಟಿ. ಶ್ರೀನಿವಾಸ್, ಸಿ.ಟಿ.ಕೃಷ್ಣಮೂರ್ತಿ ಸೇರಿದಂತೆ ಸಮಾಜದ ಹಲವು ಮುಖಂಡರು ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...