Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ವಿರುದ್ಧ ಪ್ರತಿಭಟನೆ ಕೈಬಿಟ್ಟಿದ್ದೇಕೆ ? ಮುನಿರತ್ನಗೆ ಯಡಿಯೂರಪ್ಪ ಹೇಳಿದ್ದೇನು ? 

---Advertisement---

 

ಬೆಂಗಳೂರು: ಇಂದು ಶಾಸಕ ಮುನಿರತ್ನ ವಿಧಾನಸೌಧದ ಮುಂದೆ ಏಕಾಂಕಿಯಾಗಿ ಪ್ರತಿಭಟನೆ ನಡೆಸಿದ್ದರು. ಗಾಂಧಿ ಪ್ರತಿಮೆ ಮುಂದೆ ಕೂತು ಸಿಂಗಲ್ ಆಗಿ ಪ್ರೊಟೆಸ್ಟ್ ಮಾಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮುನಿರತ್ನ ಅವರು ಆಕ್ರೋಶ ಹೊರ ಹಾಕಿದ್ದರು. ರಾಜರಾಜೇಶ್ವರಿ ನಗರಕ್ಕೆ ಅನುದಾನ ಕಡಿತಗೊಳಿಸಿದ ಹಿನ್ನಲೆ, ಸತ್ಯಾಗ್ರಹ ಮಾಡಲು ಯೋಜನೆ ರೂಪಿಸಿದ್ದರು.

ಗಾಂಧಿ ಪ್ರತಿಮೆ ಮುಂದೆ, ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ತನಕ ಪ್ರತಿಭಟನೆ ನಡೆಸಲು ಪ್ಲ್ಯಾನ್ ಮಾಡಿದ್ದರು. ಈ ವೇಳೆ ಮುನಿರತ್ನ ಅವರನ್ನು ಮಾಜಿ ಸಿಎಂ ಯಡಿಯೂರಪ್ಪ ಅವರೇ ಸಮಾಧಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ ಅವರು ಭರವಸೆ ನೀಡಿದ ಬಳಿಕ ಮುನಿರತ್ನ ಅವರು ತಮ್ಮ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.

ಬಳಿಕ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ನೀಡಿದ್ದ ಅನುದಾನವನ್ನು ರದ್ದು ಮಾಡಿ, ಸೇಡಿನ ರಾಜಕಾರಣ‌ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ. ಈ ರೀತಿ ಮಾಡಬೇಡಿ ಎಂದು ಸರ್ಕಾರಕ್ಕೆ ತಿಳಿಸುತ್ತೇನೆ. ಒಬ್ಬರೇ ಧರಣಿ ಮಾಡುವುದು ಬೇಡ. ಮುನಿರತ್ನ ಜೊತೆಗೆ ನಾವೆಲ್ಲಾ ಇದ್ದೇವೆ‌. ಮೊದಲು ಧರಣಿ ಕೈಬಿಡಿ ಎಂದು ಯಡಿಯೂರಪ್ಪ ಅವರು ಹೇಳಿದರು.

ಯಡಿಯೂರಪ್ಪ ಅವರ ಮಾತಿಗೆ ಒಪ್ಪಿಗೆ ನೀಡಿ, ಧರಣಿ ಕೈಬಿಟ್ಟ ಮುನಿರತ್ನ ಅವರು ಮಾತನಾಡಿ, ಮಧ್ಯಾಹ್ನದ ತನಕ ನಾನು ಸತ್ಯಾಗ್ರಹ ಮಾಡಬೇಕೆಂದುಕೊಂಡಿದ್ದೆ. ಆದರೆ ಯಡಿಯೂರಪ್ಪ ಅವರು ನನ್ನ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ. ಹೀಗಾಗಿ ಸತ್ಯಾಗ್ರಹ ಕೈಬಿಟ್ಟಿದ್ದೇನೆ. ನಮ್ಮಲ್ಲಿ ಗಾಂಜಾ ಮಾರಾಟ ಜಾಸ್ತಿಯಾಗ್ತಾ ಇದೆ, ಪೊಲೀಸರ ಬಳಿಯೇ ಸೆಲ್ಫಿ ತೆಗೆಸಿಕೊಳ್ಳುತ್ತಾರೆ, ಹೇಳಿದ ಕೆಲಸವಾಗುತ್ತಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...