Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.11 :  ಹತ್ತು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯ (8 ತಿಂಗಳ ಹಸುಗೂಸು) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಚಿತ್ರದುರ್ಗ ಜಿಲ್ಲೆ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಪೋಕ್ಸೋ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಹೊಸಹಟ್ಟಿಯ ಈಶಣ್ಣ (37 ವರ್ಷ) ಆರೋಪಿಯಾಗಿದ್ದು, ಈ ಬಗ್ಗೆ ತುರುವನೂರು ಪೊಲೀಸ್‌ ಠಾಣೆಯಲ್ಲಿ ದಿನಾಂಕ 19.12.2022 ರಂದು ಪ್ರಕರಣ ದಾಖಲಾಗಿತ್ತು. ಪೋಲೀಸ್ ಇನ್ಸ್ ಪೆಕ್ಟರ್ ಸಿ.ವೆಂಕಟೇಶ್‌ ಇವರು ತನಿಖೆಯನ್ನು ಪೂರೈಸಿ ಪೋಕ್ಸೋ ಕಾಯಿದೆ ಅಡಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನಂತರ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ. ಕೋಮಲ ಅವರು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ 20 ವರ್ಷ ಕಠಿಣ ಸಜೆ ಮತ್ತು ರೂ. 25,000/- ದಂಡ ವಿಧಿಸಿ ಇಂದು (ದಿನಾಂಕ 11.10.2023 ರಂದು) ತೀರ್ಪು ನೀಡಿರುತ್ತಾರೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ
ಒಟ್ಟು ರೂ. 4,25,000/- ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ.

ಪ್ರಾಸಿಕ್ಯೂಷನ್‌ ಪರವಾಗಿ ಚಿತ್ರದುರ್ಗ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಹೆಚ್.ಆರ್. ಜಗದೀಶ್ ವಾದಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment