ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಹತ್ಯೆ

ಸುದ್ದಿಒನ್ : ಪಂಜಾಬ್‌ನ ಪಠಾಣ್‌ಕೋಟ್ ವಾಯುನೆಲೆ ಮೇಲಿನ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಹತ್ಯೆಗೀಡಾಗಿದ್ದಾನೆ.

ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲತೀಫ್ ಸಾವನ್ನಪ್ಪಿದ್ದಾನೆ. ಸಿಯಾಲ್‌ಕೋಟ್‌ನ ಮಸೀದಿಯೊಂದರಲ್ಲಿ ಅವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಸ್ಥಳೀಯ ಪರಿಸ್ಥಿತಿಗಳ ಬಗ್ಗೆ ಸಂಪೂರ್ಣ ಅವಗಾಹನೆ ಹೊಂದಿರುವ ಶಾರ್ಪ್ ಶೂಟರ್‌ಗಳು ಲತೀಫ್ ನನ್ನು ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಹೊಡೆದುರುಳಿಸಿದ್ದಾರೆ.
ಇದು ಹತ್ಯೆಯಲ್ಲಿ ಸ್ಥಳೀಯ ಭಯೋತ್ಪಾದಕರ ಕೈವಾಡವಿದೆ  ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

2010 ರಲ್ಲಿ, ಪಾಕಿಸ್ತಾನದೊಂದಿಗಿನ ಸಂಬಂಧವನ್ನು  ಸರಿಪಡಿಸುವ ಪ್ರಯತ್ನಗಳ ಭಾಗವಾಗಿ ಲತೀಫ್ ಸೇರಿದಂತೆ 24 ಪಾಕಿಸ್ತಾನಿ ಭಯೋತ್ಪಾದಕರನ್ನು ಭಾರತ ಬಿಡುಗಡೆ ಮಾಡಿತ್ತು. ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ ಜೈಶ್ ಭಯೋತ್ಪಾದಕರು ಲತೀಫ್ ಬಿಡುಗಡೆಗೆ ಆಗ್ರಹಿಸಿದ್ದರು. ಆದರೆ, ಅಂದಿನ ಎನ್ ಡಿಎ ಸರ್ಕಾರ ಲತೀಫ್ ಹಾಗೂ ಇತರ 31 ಮಂದಿಯನ್ನು ಬಿಡುಗಡೆ ಮಾಡಲು ನಿರಾಕರಿಸಿತ್ತು. ಡಿಸೆಂಬರ್ 1999 ರಲ್ಲಿ, ಭಯೋತ್ಪಾದಕರು 154 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದರು ಮತ್ತು ಜೈಶ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು ಭಾರತೀಯ ಜೈಲಿನಲ್ಲಿದ್ದ ಇಬ್ಬರನ್ನು ಬಿಡುಗಡೆ ಮಾಡಿದ್ದರು.

ಜೈಶ್-ಎ-ಮೊಹಮ್ಮದ್ ಟಾಪ್ ಕಮಾಂಡರ್ ಲತೀಫ್ ಜನವರಿ 2, 2016 ರಂದು ಪಠಾಣ್‌ಕೋಟ್ ವಾಯುನೆಲೆ ಮೇಲಿನ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್.
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಭಯೋತ್ಪಾದಕರ ಹತ್ಯೆಗಳು ದೇಶವನ್ನು ತಲ್ಲಣಗೊಳಿಸುತ್ತಿವೆ.
ಪಠಾಣ್ ಕೋಟ್ ವಾಯುನೆಲೆ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಒಟ್ಟು 9 ಯೋಧರು ಹುತಾತ್ಮರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *