ಸುದ್ದಿಒನ್, ಚಿತ್ರದುರ್ಗ, (ಅ.25) : ಕೇಂದ್ರ ಸರ್ಕಾರವು ಅಕ್ಟೋಬರ್ 25 ರಂದು ಹೊರಡಿಸಿದ ಆದೇಶದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 3% ಡಿ.ಎ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಅದೇರೀತಿ ಉಲ್ಲೇಖಿತ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ 01/07/2021 ರಿಂದ ಪೂರ್ವಾನ್ವಯವಾಗುವಂತೆ ಶೇ. 3% ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಬೇಕೆಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಂದು ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರಲ್ಲಿ ರಾಜ್ಯದ ಮತ್ತು ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಮನವಿ ಮಾಡಿಕೊಳ್ಳುಇತ್ತೇನೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ
ಅಧ್ಯಕ್ಷ ಮಂಜುನಾಥ.ಕೆ ಅವರು ಪ್ರಕಟಣೆಯಲ್ಲಿ ತಿಳಸಿದ್ದಾರೆ.