ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12 : ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಬಕಾರಿ ಅಧಿಕಾರಿಗಳು 300 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಗುರುನಾಥ ಮತ್ತು ಭರತ ಬಂಧಿತ ಆರೋಪಿಗಳು.
ಅಬಕಾರಿ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ಅಕ್ಟೋಬರ್ 10 ರಂದು ಹಿರಿಯೂರು ನಗರದ ಗಾರೆದಿಂಡು ರಸ್ತೆಯಲ್ಲಿ ಅಬಕಾರಿ ದಾಳಿ ಮಾಡಿ ಇವರಿಬ್ಬರನ್ನೂ
ತಪಾಸಣೆ ನಡೆಸಿದ ವೇಳೆ ತೆನೆ, ಬೀಜಗಳಿಂದ ಕೂಡಿದ ಒಣ ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ
ಸಿಕ್ಕಿ ಬಿದ್ದಿದ್ದು, ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಅಬಕಾರಿ ಡಿವೈಎಸ್‌ಪಿ ನಾಗರಾಜ್ ತಿಳಿಸಿದ್ದಾರೆ.

ಚಿತ್ರದುರ್ಗ ಉಪ ಆಯುಕ್ತರಾದ ವನಿತಾ. ಎ. ರವರ ಮಾರ್ಗದರ್ಶನದಲ್ಲಿ ಅಬಕಾರಿ ಪೇದೆ ರಾಮಾಂಜನೇಯ, ಮತ್ತು ವಾಹನ ಚಾಲಕ ನಾಗರಾಜ ಕಲ್ಲಪ್ಪ ತೋಳಮಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








