Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 15 ರಿಂದ 25 ರವರೆಗೆ ಚಿತ್ರದುರ್ಗದಲ್ಲಿ ದುರ್ಗಾದೇವಿ ದುರ್ಗೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.13 : ದಸರಾ ನವರಾತ್ರಿ ಮೂರನೆ ವರ್ಷದ ಅಂಗವಾಗಿ ಹಿಂದೂ ಘರ್ಜನೆ ಸೇನಾ ಸಂಸ್ಥಾನ ವತಿಯಿಂದ ದುರ್ಗಾದೇವಿ ದುರ್ಗೋತ್ಸವ ಅ.15 ರಿಂದ 25 ರವರೆಗೆ ಆನೆಬಾಗಿಲು ಸಮೀಪ ಗಣಪತಿ ದೇವಸ್ಥಾನದ ಹತ್ತಿರವಿರುವ ಸುವೃಷ್ಠಿ ಪ್ರಾಣ ದೇವರ ಆವರಣದಲ್ಲಿ ನಡೆಯಲಿದೆ ಎಂದು ಹಿಂದೂ ಘರ್ಜನಾ ಸೇನಾ ಸಂಸ್ಥಾನದ ಅಧ್ಯಕ್ಷ ಸಾಗರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 22 ರಂದು ಮೈಸೂರಿನ ದಯಾನಂದಶರ್ಮ ಇವರಿಂದ ಗಣ ಹೋಮ, ನರಸಿಂಹ ಹೋಮ, ಧನ್ವಂತರಿ ಹೋಮ, ಲಲಿತ ಹೋಮ, ನವದುರ್ಗ ಹೋಮ ಶ್ರದ್ದಾಭಕ್ತಿಯಿಂದ ನಡೆಯಲಿದೆ.

ಅಕ್ಟೋಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಆರಂಭಗೊಳ್ಳಲಿರುವ ಶೋಭಾಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ನಗರದ ದೇವತೆಗಳು ಆಗಮಿಸಲಿದ್ದು, ನಂತರ ಚಂದ್ರವಳ್ಳಿಯಲ್ಲಿ ದುರ್ಗಾದೇವಿಯ ವಿಸರ್ಜನೆಯಾಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾಗರ್ ವಿನಂತಿಸಿದರು.

ಹಿಂದೂ ಘರ್ಜನೆ ಸೇನಾ ಸಂಸ್ಥಾನದ ಉಪಾಧ್ಯಕ್ಷ ಸ್ವಾಮಿ, ಕಾರ್ಯದರ್ಶಿ ಮಂಜಣ್ಣ, ಮಧುಸೂದನ್, ದೇವರಾಜ್, ಆನಂದ, ಅರುಣ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment