ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.13 : ಕುಂಚಿಟಿಗ ಜನಾಂಗಕ್ಕೆ ಕೇಂದ್ರ ಸರ್ಕಾರ ಓ.ಬಿ.ಸಿ. ಮೀಸಲಾತಿ ನೀಡುವಂತೆ ಹಿರಿಯೂರು ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ದಿ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕಳೆದ ಹನ್ನೊಂದರಂದು ಹಿರಿಯೂರಿನಿಂದ ಪಾದಯಾತ್ರೆ ಹೊರಟ ಕುಂಚಿಟಿಗ ಜನಾಂಗದವರು ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿ ಧರಣಿ ಆರಂಭಿಸಿದರು.
ರಾಜ್ಯದ ಹದಿನೆಂಟು ಜಿಲ್ಲೆ ನಲವತ್ತೈದು ತಾಲ್ಲೂಕುಗಳಲ್ಲಿರುವ 26 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಕುಂಚಿಟಿಗರು ಕಳೆದ 26 ವರ್ಷಗಳಿಂದಲೂ ಸರ್ಕಾರಕ್ಕೆ ಬೇಡಿಕೆಯಿಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕುಲಶಾಸ್ತ್ರ ಅಧ್ಯಯನ ನಡೆಸಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ರವಾನಿಸಬೇಕಿದೆ ಎಂದು ಧರಣಿನಿರತರು ಒತ್ತಾಯಿಸಿದರು.
ಕುಂಚಿಟಿಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಹೆಚ್.ರಂಗನಾಥ, ಗೌರವಾಧ್ಯಕ್ಷ ಎಂ.ಗಿರಿಸ್ವಾಮಿ, ಉಪಾಧ್ಯಕ್ಷ ಜೋಗೇಶ್, ಸಂಘಟನಾ ಕಾರ್ಯದರ್ಶಿ ಡಿ.ಚಂದ್ರಗಿರಿ, ಸಹ ಕಾರ್ಯದರ್ಶಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವಿ.ಕುಬೇರಪ್ಪ, ಖಜಾಂಚಿ ಡಿ.ಹನುಮಂತರಾಯ ಇನ್ನು ಮುಂತಾದವರು ಧರಣಿಯಲ್ಲಿ ಭಾಗವಹಿಸಿದ್ದರು.