Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 17ರಿಂದ ವಿವಿ ಸಾಗರದ ನಾಲೆಗಳಿಗೆ ( ರೈತರ ಅಚ್ಚುಕಟ್ಟು ಪ್ರದೇಶಕ್ಕೆ) ನೀರು ಹರಿಸಲು ನಿರ್ಧಾರ

---Advertisement---

ವರದಿ ಮತ್ತು ಫೋಟೋ ಕೃಪೆ 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ಇದೇ ಅಕ್ಟೋಬರ್ 17 ರಿಂದ ನವೆಂಬರ್ 11 ರ ವರೆಗೂ ವಿ.ವಿ. ಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ. ತಿಳಿಸಿದರು.

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು. ಈ  ಸಭೆಗೆ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಆದ ಡಿ.ಸುಧಾಕರ್ ಆಗಮಿಸಿದ್ದರು.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿ, ಬರಗಾಲ ಪೀಡಿತವಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರು ಅವಶ್ಯವಾಗಿರುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಲಹಾ ಸಮಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ತಿಳಿಸುತ್ತಾ, ವಿವಿ.ಸಾಗರ ಜಲಾಶಯದಿಂದ ಒಂದು ಹದದ ನೀರನ್ನು 30 ದಿನಗಳ, ಕಾಲ,
ನಾಲೆಗಳಿಗೆ ಹರಿಸುವಂತೆ ಮಾನ್ಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ನೀರು ನಾಲೆಗಳಲ್ಲಿ ಹರಿಸುವುದರಿಂದ ನಾಲೆಯ ಅಕ್ಕಪಕ್ಕದ ಎಲ್ಲಾ ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಅಲ್ಲದೇ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪ ಸ್ವಲ್ಪ ಒಣಗಿರುವ ಬೆಳೆಗಳನ್ನು ಉಳಿಸಿಕೊಳ್ಳಬಹುದು ಎಂದು ಸಲಹಾ ಸಮಿತಿ ಸದಸ್ಯರು ಅಭಿಪ್ರಾಯ ತಿಳಿಸಿದರು.

ಸದಸ್ಯರ ಮನವಿಯ ಮೇರೆಗೆ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಯವರು ದಿನಾಂಕ 17.10.2023  ರಿಂದ 16,11.2023 ರವರೆಗೆ ನೀರು ಹರಿಸಲು ಸೂಚಿಸಿದರು. ಪ್ರಸ್ತುತ ವಿವಿ ಸಾಗರ ಜಲಾಶಯದಲ್ಲಿ 121.15 ಅಡಿಗಳಷ್ಟು ಮತ್ತು 22.00 ಟಿ.ಎಂ.ಸಿ. ನೀರು ಇದೆ.

ಎಲ್ಲಾ ಇಲಾಖೆಯ ಸಹಯೋಗದೊಂದಿಗೆ ಸಮರ್ಪಕವಾದ ನೀರು ನಿರ್ವಹಣೆ ಮಾಡಲು ಹಾಗೂ ನೀರು ಯಾವುದೇ ಕಾರಣಕ್ಕೆ ಪೋಲಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ  ಸಚಿವರು ನಿರ್ದೇಶನ ನೀಡಿದರು.

ಮಾನ್ಯ ಜಿಲ್ಲಾಧಿಕಾರಿಗಳು ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೆ ನೀರು ಹರಿಸುವ ಪೂರ್ವದಲ್ಲಿ ಮುಂಜಾಗ್ರತಾವಾಗಿ ಜನ ಜಾನುವಾರುಗಳಿಗೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೂಚಿಸಿದರು.

ಈ ಸಭೆಯಲ್ಲಿ ಭಾಗವಹಿಸಿದ ಸಲಹಾ ಸಮಿತಿ ಸದಸ್ಯರುಗಳಾದ .ಕೆ.ಟಿ.ತಿಪ್ಪೇಸ್ವಾಮಿ, ಶ್ರೀ.ಸಿದ್ದರಾಮಣ್ಣ,  ಶ್ರೀ.ಆರ್.ಗೌಡ ಮತ್ತು ಶ್ರೀ ರಾಮಕುಮಾರ್ ಹಾಗೂ ಅಧಿಕಾರಿಗಳಾದ ವಿಜಯಕುಮಾರ್.ಎ.ಎಂ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ವಿ.ವಿ.ಸಾಗರ ಉಪವಿಭಾಗ, ಹಿರಿಯೂರು, ಲೋಕೇಶ್, ಹಿರಿಯ ಸಹಾಯಕ ನಿರ್ದೇಶಕರು – ತೋಟಗಾರಿಕಾ ಇಲಾಖೆ, ಹಿರಿಯೂರು,  ಕಿರಣ್, ಸಹಾಯಕ ಕೃಷಿ ಅಧಿಕಾರಿಗಳು, ಹಿರಿಯೂರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...