Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಸಿಎಂ ಡಿಕೆಶಿಯನ್ನು ಭೇಟಿಯಾದ ನಟಿ ಲೀಲಾವತಿ, ವಿನೋದ್ ರಾಜ್ : ಕಾರಣ ಏನು ಗೊತ್ತಾ..?

---Advertisement---

 

 

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರಿಗೆ ಆರೋಗ್ಯ ಸರಿ ಇಲ್ಲ. ಆದರೂ ಸೋಲದೇವನಹಳ್ಳಿಯಿಂದ ಸದಾಶಿವನಗರದ ತನಕ ಬಂದಿದ್ದಾರೆ.‌ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಆಹ್ವಾನ ಪತ್ರಿಕೆ ನೀಡಲು ಬಂದಿದ್ದರು. ಅಮ್ಮನ ಜೊತೆಗೆ ನಟ ವಿನೋದ್ ರಾಜ್ ಕೂಡ ಬಂದಿದ್ದರು.

ಹಿರಿಯ ನಟಿ ಲೀಲಾವತಿ ಅವರಿಗೆ ಪ್ರಾಣಿ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಅವರ ತೋಟದಲ್ಲೂ ಪ್ರಾಣಿಗಳೇ ಹೆಚ್ಚಾಗಿವೆ. ಹಲವು ತಳಿಯ ನಾಯಿಗಳಂತು ಸಿಕ್ಕಾಪಟ್ಟೆ ಇದಾವೆ. ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಿಸಿರುವ ಲೀಲಾವತಿ ಅವರು, ಇದೀಗ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಿಸಿದ್ದಾರೆ. ಅದರ ಉದ್ಘಾಟನೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಲು ಬಂದಿದ್ದರು.

ಭೇಟಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಪ್ರಾಣಿಗಳ ರಕ್ಷಣೆ ಈ ತಾಯಿ ಮಗನ ಹವ್ಯಾಸ. ಪಶು ವೈದ್ಯಕೀಯ ಕಾಲೇಜು ಉದ್ಘಾಟನೆಗೆ ದಿನಾಂಕ ನೀಡಿ ಎಂದು ಕೇಳಿದ್ದಾರೆ. ನಾನು ಸಮಯ ನೋಡಿಕೊಂಡು ಹೇಳುತ್ತೇನೆ. ಹಿರಿಯವರಾದ ಲೀಲಾವತಿಯವರನ್ನು ಕರೆದುಕೊಂಡು ಬರುವುದು ಬೇಡ ಎಂದು ನಾನು ಹೇಳಿದ್ದೆ. ಆದರೂ ಅವರು ಇಲ್ಲಿಗೆ ನನ್ನ ಮೇಲೆ ಅಭಿಮಾನವಿಟ್ಟು ಬಂದಿದ್ದಾರೆ. ಅವರಿಗೆ ಉತ್ತಮವಾದ ಆರೋಗ್ಯ ಸಿಗಲಿ ಎಂದಿದ್ದಾರೆ.

ಇನ್ನು ಲೀಲಾವತಿಯವರು ಅನಾರೋಗ್ಯದ ಕಾರಣ ಕಾರಿನಲ್ಲಿಯೇ ಕುಳಿತಿದ್ದರು. ಡಿಕೆ ಶಿವಕುಮಾರ್ ಅವರು ಕಾರಿನ ಬಳಿ ಹೋಗಿ ಮಾತನಾಡಿಸಿದ್ದಾರೆ. ಆರೋಗ್ಯ ವಿಚಾರಿಸಿದ್ದಾರೆ. ಸೋಲದೇವನಹಳ್ಳಿಯಲ್ಲಿ ನಿಗದಿಯಾಗಿರುವ ಜಮೀನಿನ ನೋಂದಣಿ ಬಗ್ಗೆಯೂ ಮನವಿ ಮಾಡಿದ್ದಾರೆ. ಆ ಸಂಬಂಧ ಆದಷ್ಟು ಸಹಾಯ ಮಾಡುವುದಾಗಿಯೂ ಭರವಸೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...