Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಒನ್ ನೇಷನ್.. ಒನ್ ಐಡಿ : ಇದೇ ತಿಂಗಳು ಪೋಷಕರು ಮತ್ತು ಶಿಕ್ಷಕರ ಸಭೆ..!

---Advertisement---

 

ನವದೆಹಲಿ: ಒಂದು ರಾಷ್ಟ್ರ.. ಒಂದು ವಿದ್ಯಾರ್ಥಿ ಐಡಿಯನ್ನು ತರಲು ಕೇಂದ್ರ ಶಿಕ್ಷಣ ಸಚಿವಾಲಯ ತೀರ್ಮಾನ ಮಾಡಿದೆ. ಇದಕ್ಕಾಗಿ ಅಕ್ಟೋಬರ್ 16 ಅಥವಾ‌ 18‌ ಶಿಕ್ಷಕರು ಹಾಗೂ ಪೋಷಕರ ಸಭೆಯನ್ನು ಕರೆಯಲಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಯ ಮಕ್ಕಳು ಈ ಐಡಿಯನ್ನು ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಈ ಐಡಿ ಬಳಕೆಯಾಗುತ್ತದೆ. ಆಧಾರ್ ಕಾರ್ಡ್ ನಂತೆಯೇ 12 ಅಂಕಿಗಳ ಕಾರ್ಡ್ ಇದಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಐಡಿಯನ್ನು ನೀಡಲಾಗುತ್ತದೆ. ಈ ಸಂಬಂಧ ಕೇಂದ್ರ ಶಿಕ್ಷಣ ಇಲಾಖೆ ಪೋಷಕರಿಗೂ ಕೇಳಿದೆ. ಒನ್ ನೇಷನ್ ಒನ್ ಸ್ಟುಡೆಂಟ್ ಯೋಜನೆಯಡಿ, ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ, ಮೂಲಕ ವಿದ್ಯಾರ್ಥಿಯ ಹೊಸ ಗುರುತಿನ ಚೀಟಿ ರಚಿಸಲು ಕೇಳಲಾಗಿದೆ.

ಇದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣ ಹಾಗೂ ಸಾಧನೆಗಳನ್ನು ಟ್ರ್ಯಾಕ್ ಮಾಡುತ್ತದೆ. ಈ ಸಂಬಂಧ ಪೋಷಕರ ಸಭೆ ಕರೆಯಲು ಕೇಂದ್ರ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಹೀಗಾಗಿ ಅಕ್ಟೋಬರ್ 16 ಮತ್ತು 18ರ ನಡುವೆ ಈ ಸಭೆ ನಡೆಯಲಿದೆ. ಈ ಮಾಹಿತಿಯನ್ನು ಕೇಂದ್ರ ಶಿಕ್ಷಣ ಇಲಾಖೆ ಶಿಕ್ಷಣ ಸಂಸ್ಥೆಗಳಿಗೆ ತಿಳಿಸಿದೆ. ಆಧಾರ್ ಕಾರ್ಡ್ ನಂತೆ ವಿದ್ಯಾರ್ಥಿಗಳಿಗೆ ಐಡಿ ನೀಡಲಾಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...