Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಳ್ಳನ ಮನಸ್ಸು ಹುಳ್ಳುಳ್ಳಗೆ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು ! ಏನಿದು ಕುಮಾರಸ್ವಾಮಿಯವರ ಗಾದೆಮಾತು ಮತ್ತು ಟ್ವೀಟ್ ವಾರ್…

---Advertisement---

 

 

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ವಾಕ್ಸಮರ ಮುಂದುವರೆದಿದೆ. ಅಂದು ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಮಾತಿಗೆ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಮಾತಿನ ತಿರುಗೇಟು ನೀಡಿದ್ದರು. ಇದೊಗ ಮತ್ತೆ ಡಿಕೆಶಿ ಮೇಲೆ ಕುಮಾರಸ್ವಾಮಿ ಟ್ವೀಟ್ ಪ್ರಹಾರ ಮಾಡಿದ್ದಾರೆ.

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ.. ಕಳ್ಳನ ಮನಸ್ಸು ಹುಳ್ಳುಳ್ಳಗೆ.. ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ.

“ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ” ಎಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ. ಅಂದಹಾಗೆ, ನಾನು ಐಟಿ ಪ್ರತಿನಿಧಿಯೂ ಅಲ್ಲ, ಈಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ?.

40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ?

ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು. ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...