Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎರಡನೇ ದಸರಾ ಖ್ಯಾತಿಯ ಚಿತ್ರದುರ್ಗದ ಶರಣ ಸಂಸ್ಕೃತಿ ಉತ್ಸವ-2023 : ಅಕ್ಟೋಬರ್ 21 ರಿಂದ 25 ರವರೆಗೆ ಸರಳ ಆಚರಣೆ : ಶ್ರೀ ಬಸವಪ್ರಭು ಸ್ವಾಮೀಜಿ

---Advertisement---

 

ಸುದ್ದಿಒನ್, ಚಿತ್ರದುರ್ಗ,  ಅಕ್ಟೋಬರ್.16 :  ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ಶರಣಸಂಸ್ಕøತಿ ಉತ್ಸವ-2023ರ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಶ್ರೀಮಠದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವಪ್ರಭು ಸ್ವಾಮಿಗಳು, ಈ ಉತ್ಸವವು ನಾಡಿನಲ್ಲಿ ಎರಡನೇ ದಸರಾ ಎಂದೇ ಖ್ಯಾತಿ ಪಡೆದಿದೆ. ಈ ಬಾರಿ ದಿನಾಂಕ 21-10-23 ರಿಂದ 25-10-23ರವರೆಗೆ ಸರಳವಾಗಿ ಆಯೋಜಿಸಲಾಗಿದ್ದು, ಪ್ರತಿದಿನ ದಾಸೋಹ ನಡೆಯುತ್ತದೆ. ಮುರುಗಿ ಶಾಂತವೀರ ಸ್ವಾಮಿಗಳ ಭಾವಚಿತ್ರವನ್ನು ಇಟ್ಟು ಶೂನ್ಯಪೀಠಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.

ಅಕ್ಟೋಬರ್ 21ರಂದು ಬೆಳಗ್ಗೆ 10.00 ಗಂಟೆಗೆ ಬಸವತತ್ತ್ವ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಉತ್ಸವದ ಕಾರ್ಯಕ್ರಮಗಳು, ಅದೇದಿನ ಬೆಳಗ್ಗೆ 11 ಗಂಟೆಗೆ ಕೃಷಿಮೇಳ, ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ನಡೆಯಲಿದ್ದು, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಬಸವತತ್ತ್ವ ಸಮಾವೇಶದಲ್ಲಿ ಸಚಿವರಾದ ಡಿ. ಸುಧಾಕರ್, ಈಶ್ವರ ಖಂಡ್ರೆ, ಚಿತ್ರನಟ ದೊಡ್ಡಣ್ಣ, ಶಾಸಕರಾದ ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ ಮುಂತಾದವರು ಭಾಗವಹಿಸುವರು.

ಅಕ್ಟೋಬರ್  22ರಂದು ಬೆಳಗ್ಗೆ 10ಕ್ಕೆ ಮಹಿಳಾ ಕ್ರೀಡಾಕೂಟ, ಸಂಜೆ 6.30 ಗಂಟೆಗೆ ಯುವಜನ ಸಮಾವೇಶ ನಡೆಯಲಿದ್ದು, ಕೇಂದ್ರಸಚಿವ ಭಗವಂತ ಖೂಬ, ರಾಜ್ಯಸಚಿವರಾದ ಎಂ.ಬಿ.ಪಾಟೀಲ, ಬಿ. ನಾಗೇಂದ್ರ, ಶಾಸಕ ಬಿ.ವೈ. ವಿಜಯೇಂದ್ರ ಮೊದಲಾದವರು ಭಾಗವಹಿಸುವರು.

ಅಕ್ಟೋಬರ್ 23ರಂದು ಸಂಜೆ 6.30 ಗಂಟೆಗೆ ನಡೆಯುವ ಮಹಿಳಾ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕಿ ಶಶಿಕಲಾ ಜೊಲ್ಲೆ ಮೊದಲಾದವರು ಭಾಗವಹಿಸುವರು.

ಅಕ್ಟೋಬರ್ 24ರಂದು ಅಪರಾಹ್ನ 4.00 ಗಂಟೆಗೆ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಶ್ರೀಗಳಿಗೆ ಭಕ್ತಿ ಸಮರ್ಪಣೆ ನಡೆಯಲಿದೆ. ಶ್ರೀಮಠದಲ್ಲಿ ಸಂಜೆ 6.30ಕ್ಕೆ ಮಕ್ಕಳ ಸಂಭ್ರಮ ಏರ್ಪಡಿಸಲಾಗಿದ್ದು, ಬಾಲಪ್ರತಿಭೆಗಳು ಭಾಗವಹಿಸಲಿದ್ದಾರೆ.

ಕೊನೆಯ ದಿನ ಅಕ್ಟೋಬರ್ 25 ರಂದು ಬೆಳಗ್ಗೆ 10 ಗಂಟೆಗೆ ಶೂನ್ಯಪೀಠಾರೋಹಣ, 12 ಗಂಟೆಗೆ ಶ್ರೀ ಜಗದ್ಗುರು ಜಯದೇವ ಜಂಗೀಕುಸ್ತಿ, ಸಂಜೆ 6.30ಕ್ಕೆ ಶರಣಸಂಸ್ಕøತಿ ಉತ್ಸವ ಸಮಾರೋಪ ನಡೆಯಲಿದ್ದು, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿಸಚಿವ ಹೆಚ್.ಎಂ. ರೇವಣ್ಣ ಮೊದಲಾದವರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮಿಗಳು, ಕಾರ್ಯಾಧ್ಯಕ್ಷ ಕೆ.ಸಿ. ನಾಗರಾಜ್, ಎಸ್.ಜೆ.ಎಂ. ವಿದ್ಯಾಪೀಠದ ಸಿಇಓ ಎಂ. ಭರತ್‍ಕುಮಾರ್, ಉಮೇಶ್ ವಕೀಲರು, ಎಸ್. ಪರಮೇಶ್ವರ್ ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment