Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ :  ವ್ಯಾಕ್ಸಿನೇಷನ್‍ನಲ್ಲಿ 27ನೇ ಸ್ಥಾನದಲ್ಲಿದೆ, ಪ್ರಮಾಣ ಹೆಚ್ಚಳ ಮಾಡಬೇಕು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್. 26) : ಕೋವಿಡ್-19ರ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಬಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ವ್ಯಾಕ್ಸಿನೇಷನ್‍ನಲ್ಲಿ ಅನೇಕ ಜಿಲ್ಲೆಗಳು ಉತ್ತಮ ಪ್ರಗತಿ ಸಾಧಿಸಿವೆ. ಆದರೆ ಚಿತ್ರದುರ್ಗ ಜಿಲ್ಲೆಯು ವ್ಯಾಕ್ಸಿನೇಷನ್‍ನಲ್ಲಿ 27ನೇ ಸ್ಥಾನದಲ್ಲಿದೆ. ಜನರ ಆರೋಗ್ಯ ಸುರಕ್ಷತೆಯ ದೃಷ್ಠಿಯಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುಂದಿನ ದಿನಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಯಾವುದೇ ರೀತಿಯಲ್ಲಿ ಕೊರತೆ ಇಲ್ಲ. ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಮಸ್ಯೆಯೂ ಇಲ್ಲ. ಶಿಕ್ಷಣ, ಮಾಹಿತಿ, ಸಂವಹನಕ್ಕೆ ಅನುದಾನ ನೀಡಲಾಗಿದ್ದು, ಎಲ್ಲ ರೀತಿಯ ಸೌಕರ್ಯ ಕಲ್ಪಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಮೊದಲ ಡೋಸ್ ಶೇ.79 ಹಾಗೂ ಎರಡನೇ ಡೋಸ್ ಶೇ.45 ರಷ್ಟು ಆಗಿದ್ದು, ವ್ಯಾಕ್ಸಿನೇಷನ್ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಹೇಳಿದರು.

ಜಿಲ್ಲೆಯ ಯಾವ ಗ್ರಾಮದಲ್ಲಿ ಮೊದಲ ಡೋಸ್ ಮತ್ತು ಎರಡನೇ ಡೋಸ್ ತೆಗೆದುಕೊಂಡಿಲ್ಲ ಎಂಬ ಮೈಕ್ರೋಪ್ಲಾನ್ ತಯಾರು ಮಾಡಿ ವ್ಯಾಕ್ಸಿನೇಷನ್ ನೀಡಲು ತಂಡ ರಚನೆ ಮಾಡಿ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಎಲ್ಲ ರೀತಿಯ ಐಇಸಿ ಚಟುವಟಿಕೆಗಳನ್ನು ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಜನರಿಗೆ ಅರಿವು ಮೂಡಿಸಿದಾಗ ಜನರು ಮುಂದೆ ಬರುತ್ತಾರೆ. ಹಾಗಾಗಿ ವ್ಯಾಕ್ಸಿನೇಷನ್ ಪ್ರಮಾಣ ಹೆಚ್ಚಳಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು. ಆರೋಗ್ಯ ಅಧಿಕಾರಿಗಳ ತಂಡ ಮಾಡಿ ಪ್ರತಿ ದಿನವೂ ಅವರಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಮಾರ್ಗದರ್ಶನ ನೀಡಿ ಪೀಲ್ಡ್ ಸಮಸ್ಯೆ ಬಗೆಹರಿಸಬೇಕು. ಕೆಳಹಂತದ ಅಧಿಕಾರಿಗಳಿಗೆ ಧೈರ್ಯ ತುಂಬಿ ಅವರಿಗೆ ಅಗತ್ಯವಾದ ಸಲಹೆಗಳನ್ನು ನೀಡಿದರೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಲಸಿಕೆ ನೀಡಲು 12ಲಕ್ಷ ಗುರಿ ನಿಗಧಿಪಡಿಸಲಾಗಿದೆ. ಅದರಲ್ಲಿ 9ಲಕ್ಷ80 ಸಾವಿರ ಜನರಿಗೆ ಯಶಸ್ವಿಯಾಗಿ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಮೊದಲ ಡೋಸ್ ಶೇ.79 ಹಾಗೂ ಎರಡನೇ ಡೋಸ್ ಶೇ.46ರಷ್ಟು ಪ್ರಗತಿ ಸಾಧಿಸಲಾಗಿದೆ. ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣ ಕಡಿಮೆ ಇದ್ದು, ಕೋವಿಡ್ ಲಸಿಕಾ ಮೇಳಗಳನ್ನು ಆಯೋಜಿಸುವ ಮೂಲಕ ಪ್ರಗತಿ ಸಾಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 4 ಆಕ್ಸಿಜನ್ ಪ್ಲಾಂಟ್ ಕಾರ್ಯಾರಂಭ ಮಾಡುತ್ತಿದ್ದು, ನಿರ್ವಹಣೆ ಸಮಸ್ಯೆಯಾಗದಂತೆ ಈ ವಾರದಲ್ಲಿ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಪ್ರಕರಣಗಳ ತ್ವರಿತ ವಿಲೇವಾರಿಗೆ ಸೂಚನೆ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ಬಾಕಿ ಇದ್ದು, ತ್ವರಿತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ, ಉಪವಿಭಾಗಾಧಿಕಾರಿಗಳ ನ್ಯಾಯಾಲಯ, ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳು ಇದ್ದು, ಎಲ್ಲ ಅಧಿಕಾರಿಗಳು ತ್ವರಿತಗತಿಯಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.
ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಂಗಸ್ವಾಮಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!