ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.16 : ರಾಜ್ಯದಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಅದರ ಪರಿಣಾಮ ಕಂಟ್ರಾಕ್ಟರ್ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಹಣ ಸಿಕ್ಕಿದೆ. ಈ ಹಣ ಬಿಜೆಪಿಗೆ ಸೇರಿದ್ದು, ಎಂದು ಹಲವರು ಹೇಳುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಇದೊಂದು ಹಾಸ್ಯಸ್ಪದ ಎಂದಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಹಣ ಸಂಗ್ರಹವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಗೆ ಹಣ ನೀಡಲು ಪೈಪೋಟಿ ನಡೆಯುತ್ತಿದೆ. ಇಬ್ಬರ ಪೈಪೋಟಿ ನಡುವೆ ಹಣದ ವಿಷಯ ಬಯಲಾಗಿರಬಹುದು.
ಭದ್ರಾ ಯೋಜನೆಗೆ 1.950 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಕಮಿಷನ್ ಬಂದ ಬಳಿಕ ಹಣ ಬಿಡುಗಡೆಗೆ ಸೂಚಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ. ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲು ಮಾರ್ಗ ಭೂಸ್ವಾಧೀನಕ್ಕೆ ಹಣ ಬಿಡುಗಡೆ ಮಾಡಿಲ್ಲ. ಯಾರು ಕಲೆಕ್ಷನ್ ಗೆ ಕರೆ ಮಾಡುತ್ತಾರೆಂದು ಜಿಲ್ಲೆಗೆ ಗೊತ್ತಿದೆ. ಕಮಿಷನ್ ಬೇಕೆಂದು ಕರೆ ಮಾಡುತ್ತಾರೆಂದು ಅಧಿಕಾರಗಳೇ ಹೇಳುತ್ತಾರೆ.
ನಿಮ್ಮ ಕಾಲದಲ್ಲಿ ಭದ್ರಾ ಯೋಜನೆ ಆಗದಿದ್ದರೆ ಜಿಲ್ಲೆಗೆ ಯೋಜನೆಯೇ ಬರಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ
ಡಿಸಿ ಎದುರಲ್ಲೇ ಅಧಿಕಾರಿಗಳು ಹೇಳಿದ್ದಾರೆ. ನಿಮ್ಮ ಯೋಗ್ಯತೆ ಅಧಿಕಾರಿಗಳಿಗೆ ಗೊತ್ತಾಗಿದೆ. ಕಾಂಗ್ರೆಸ್ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹಿರು. ಸರ್ಕಾರ ದಿವಾಳಿ ಆಗಿದೆ ಎಂದು ಸಿಎಂ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ. ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











