ಬೆಂಗಳೂರು ವಿಶ್ವ ವಿದ್ಯಾಲಯದ 58ನೇ ಘಟಿಕೋತ್ಸವ ನಡೆದಿದೆ. ಈ ಹಿನ್ನೆಲೆ ಇಬ್ಬರು ಸಾಧಕರಿಗೆ ವಿವಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ. ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಮಾಜಿ ಪ್ರಧಾಮಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ರಾಜ್ಯಪಾಲರಾದ ಥಾವರ್ ಚಂದ್ ಈ ಗೌರವ ನೀಡಿದ್ದಾರೆ.
ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ತುಂಬಾ ಸಂತೋಷದಿಂದಾನೇ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೀನಿ. ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಈ ವಿವಿ ಬಗ್ಗೆ ನನಗೆ ಅಪಾರ ಗೌರವವಿದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಹೃದಯವಂತಿಕೆ ಬೆಳೆಸಬೇಕು ಎಂದಿದ್ದಾರೆ.
ಇದೇ ವೇಳೆ ಚಂದ್ರಯಾನ 3 ಯಶಸ್ಸಿಗೆ ಕಾರಣವಾದ ಇಸ್ರೋ ಅಧ್ಯಕ್ಷ ಸೋಮನಾಥ್ ಅವರ ಬಗ್ಗೆ ಮಾತನಾಡಿ, ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸೋಮನಾಥ್ ಅವರಿಗೆ ಯೌರವ ಡಾಕ್ಟರೇಟ್ ಸಂದಿರುವುದು ಸಂತಸದ ವಿಚಾರ. ಇಸ್ರೋದ ಸಂಸ್ಥೆ ಇಂದು ಭಾರತ ಭೂಪಟಕ್ಕೆ ಪರಿಚಯ ಮಾಡಿ ತೋರಿಸಿದೆ ಎಂದಿದ್ದಾರೆ. ಜೊತೆಗೆ ಘಟಿಕೋತ್ಸವದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ತಿಳಿಸಿದ್ದಾರೆ.