Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

KSRTC ಬಸ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.17 : ಕೆಎಸ್ ಆರ್ ಟಿಸಿ  ಬಸ್ ಹಾಗೂ ಬೈಕಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಳ್ಳಕೆರೆ – ನಾಯಕನಹಟ್ಟಿ ರಸ್ತೆಯಲ್ಲಿ ನಡೆದಿದೆ.

ತಾಲ್ಲೂಕಿನ ಮಲ್ಲೂರಹಳ್ಳಿ ಮೂಲದ ಬೈಕ್ ಸವಾರ ನವೀನ್(22) ಮೃತ ಯುವಕ. ಟಾಟಾ  ಏಸ್ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ  ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿಯ ರಭಸಕ್ಕೆ ಸವಾರ  ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೂ ಇದೇ ಬೈಕಿನಲ್ಲಿದ್ದ ಇಬ್ಬರಿಗೆ ಗಾಯಗಳುಗಳನ್ನು
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಹಾಗೂ ಚಳ್ಳಕೆರೆ KSRTC ಡಿಪೋ ಮ್ಯಾನೇಜರ್ ಎಸ್. ಪ್ರಭು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment