Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಸೌಧ ಕಟ್ಟಡಕ್ಕೆ ಅರಿಶಿನ – ಕುಂಕುಮ ನಿಷೇಧ : ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಆಕ್ರೋಶ

Facebook
Twitter
Telegram
WhatsApp

 

ಬೆಂಗಳೂರು: ಆಯುಧ ಪೂಜೆ ಹತ್ತಿರವಾಗುತ್ತಿದೆ. ಆಯುಧ ಪೂಜೆ ಸಂದರ್ಭದಲ್ಲಿ ಅರಿಶಿನ, ಕುಂಕುಮವಿಟ್ಟು ಪೂಜೆ ಮಾಡಿ, ಕುಂಬಳಕಾಯಿ ಒಡೆಯುತ್ತಾರೆ. ಆದರೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಕುಂಕುಮ ಮತ್ತು ಅರಿಶಿನ ಬಳಕೆ ನಿಷೇಧ ಮಾಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗರಂ ಆಗಿದ್ದು, ಇಂಎಇಯಾ ಮೈತ್ರಿ ಪಕ್ಷಗಳ ನಡುವೆ ನೂರು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅವರು ಈ ನೆಲದ ಸ್ಥಳೀಯ ಸಂಸ್ಕೃತಿಯ ದ್ವೇಷ ಮತ್ತು ತಿರಸ್ಕಾರಗಳಲ್ಲಿ ಒಂದಾಗಿದ್ದಾರೆ. ವರ್ಷಗಳಿಂದ ದಕ್ಷಿಣ ಭಾರತದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಉದ್ಯೋಗಿಗಳು ಆಯುಧ ಪೂಜೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ಮಹತ್ವ್ ಸಾಂಸ್ಕೃತಿಕ ಆಚರಣೆಗೆ ಇದೀಗ ಮೈತ್ರಿಕೂಟ ತಡೆಯುವ ಗುರಿಯನ್ನು ಹಾಕಿಕೊಂಡಿದೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಎಸ್.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ.21  :  ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು

ಚಿತ್ರದುರ್ಗ | ಸಿಡಿಲಿಗೆ ಇಬ್ಬರ ಸಾವು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಮೇ. 21 : ಸೋಮುವಾರ ರಾತ್ರಿ ಗುಡುಗು ಸಹಿತ ಮಳೆ ಸುರಿದ್ದಿದ್ದು ಸಿಡಿಲು ಬಡಿದು ಮಹಾರಾಷ್ಟ್ರ

error: Content is protected !!