Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ಸಚಿವರ ಹೆಸರು ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!

---Advertisement---

 

 

ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ‘ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ಕಾರಣ’ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ‌ ಮಾಡಿದ್ದ ಆಡಿಯೋದಲ್ಲಿ, ನಾನು ಹಿಂದೂ ಹುಲಿಯಾಗಿದ್ದೇನೆ. ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಡಾ. ಶರಣ ಪ್ರಕಾಶ್ ಹಿಂದೂ ಧರ್ಮದ ಬಗ್ಗೆ ಮಾತನಾಡಬಾರದು. ಮಾತನಾಡಿದರೆ ಇವರಿಗೆ ಬೆಂಕಿ ಬೀಳುತ್ತದೆ ಎಂದು ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಕಾಂಗ್ರೆಸ್ ನವರ ಹೆಸರನ್ನು ಹೇಳಿರುವುದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ.

ಈ ಸಂಬಂಧ ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ, ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸವಾಗುತ್ತಿದೆ. ಶಿವಕುಮಾರ್ ತನ್ನ ಸಾವಿಗೆ ಕಾರಣವಾದವರ ಬಗ್ಗೆಯೂ ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿಯಾಗಿರುವ ಪ್ರಿಯಾಂಗ್ ಖರ್ಗೆ ಒಂದು ಮಾತು ಆಡುತ್ತಿಲ್ಲ.‌ ಈ ಸಾವಿನ ನೈತಿಕ ಹೊಣೆಹೊತ್ತು, ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...