Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೇವಾ ಮನೋಭಾವನೆ ನಮ್ಮ ಧ್ಯೇಯ : ಸರ್ಕಾರಿ ಶಾಲೆಯನ್ನು ಹ್ಯಾಪಿ ಶಾಲೆಯನ್ನಾಗಿ ಮಾಡುವ ಗುರಿಯಿದೆ : ಶ್ರೀಮತಿ ಮೋಕ್ಷ ರುದ್ರಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.20  : ಸಂತೆಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ವತಿಯಿಂದ ಆರ್.ಓ. ವಾಟರ್‌ ಫಿಲ್ಟರ್ ನೀಡಲಾಯಿತು.

ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಮೋಕ್ಷ ರುದ್ರಸ್ವಾಮಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಶುದ್ದ ಕುಡಿಯುವ ನೀರು ಸಿಗಬೇಕೆಂಬ ಉದ್ದೇಶದಿಂದ ಆರ್.ಓ.ವಾಟರ್‌ ಫಿಲ್ಟರ್ ಅಳವಡಿಸಲಾಗಿದೆ. ಮಕ್ಕಳ ಸಮವಸ್ತ್ರಕ್ಕಾಗಿ ಸ್ಟಿಚ್ಚಿಂಗ್ ಚಾರ್ಜ್ ಕೂಡ ನೀಡಲಾಗಿದೆ. ಸೇವಾ ಮನೋಭಾವನೆ ನಮ್ಮ ಧ್ಯೇಯವಾಗಿರುವುದರಿಂದ ಮುಂದಿನ ದಿನಗಳಲ್ಲಿ ಶಾಲೆಗೆ ಸುಣ್ಣಬಣ್ಣ ಬಳಿಸಿ ಶೌಚಾಲಯ ನಿರ್ಮಿಸಿ ಹ್ಯಾಪಿ ಶಾಲೆಯನ್ನಾಗಿ ಮಾಡುವ ಗುರಿಯಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಿಗೆ ಹೆಚ್ಚು ಬಡ ಮಕ್ಕಳೆ ಬರುವುದರಿಂದ ಖಾಸಗಿ ಶಾಲೆಯ ಮಾದರಿಯಲ್ಲಿಯೇ ಸರ್ಕಾರಿ ಶಾಲೆ ಮಕ್ಕಳಿಗೂ ಎಲ್ಲಾ ಮೂಲಭೂತ ಸೌಲಭ್ಯಗಳು ಸಿಗಬೇಕು. ಹಾಗಾಗಿ ಇನ್ನರ್‍ವೀಲ್ ಕ್ಲಬ್ ಮೊದಲಿನಿಂದಲೂ ಇಂತಹ ಉಪಯುಕ್ತ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.

ಡಿಸ್ಟ್ರಿಕ್ಟ್‌ ಚೇರ್ಮನ್ ಸುಮಿತ್ರ ನಾಗರಾಜ್ ಮಾತನಾಡಿ ಸರ್ಕಾರಿ ಶಾಲೆಯಲ್ಲಿನ ಬಡ ಮಕ್ಕಳಿಗೂ ಶುದ್ದ ಕುಡಿಯುವ ನೀರು ಸಿಗಬೇಕು. ಕಲುಷಿತ ನೀರು ಸೇವನೆಯಿಂದ ಆರೋಗ್ಯ ಹಾಳಾಗುವ ಸಾಧ್ಯತೆಗಳಿರುತ್ತದೆ. ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾಹರಿಸಬೇಕು. ಇನ್ನರ್‍ವೀಲ್ ಕ್ಲಬ್ ಅಧ್ಯಕ್ಷೆ ಮೋಕ್ಷರುದ್ರಸ್ವಾಮಿ ತಮ್ಮ ಅಧಿಕಾರವಧಿಯಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಅನೇಕ ಸಲಕರಣೆಗಳನ್ನು ನೀಡಿದ್ದಾರೆಂದು ಶ್ಲಾಘಿಸಿಸಿದರು.

ಪಿ.ಡಿ.ಸಿ.ಗಳಾದ ಜ್ಯೋತಿ ಲಕ್ಷ್ಮಣ್, ವೀಣಸ್ವಾಮಿ, ಇನ್ನರ್‍ವೀಲ್ ಕ್ಲಬ್ ಕಾರ್ಯದರ್ಶಿ ರೇಷ್ಮಖಾನಂ, ಪಾಸ್ಟ್ ಪ್ರೆಸಿಡೆಂಟ್ ನಾಗರತ್ನ ಭದ್ರಿನಾಥ್, ಮುಖ್ಯ ಶಿಕ್ಷಕಿ ರೇಣುಕಮ್ಮ ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment