ಕೋಲಾರ: ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಎಂ ಶ್ರೀನಿವಾಸ್ ಮೇಲೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರು ಜನರು ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಶ್ರೀನಿವಾಸಪುರದ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಮೃತ ಶ್ರೀನಿವಾಸ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿದ್ದರು. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಾಗಾರಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಟ್ಯಾಕ್ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ, ಅನಿಲ್ ಎಂಬುವವರನ್ನು ಕೊಲೆ ಮಾಡಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ.
ಇನ್ನು ಮೃತ ಶ್ರೀನಿವಾಸ್ ಪುರಸಭೆಯ ಮಾಜಿ ಅಧ್ಯಕ್ಷರಾಗಿ, ಎಪಿಎಂಸಿಯ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











