Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವಜನತೆ ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳ ಕಡೆಗೆ ಆಸಕ್ತಿ ತೋರಿಸಬೇಕು : ಬಸವ ಶಾಂತಲಿಂಗ ಸ್ವಾಮೀಜಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.25 : ಯುವಜನತೆ ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳ ಕಡೆಗೆ ಆಸಕ್ತಿ ತೋರಿಸಬೇಕು ಎಂದು ಹಾವೇರಿ ಶ್ರೀ ಹೊಸಮಠದ ಶ್ರೀ ನಿ.ಪ್ರ.ಸ್ವ ಬಸವ ಶಾಂತಲಿಂಗ ಸ್ವಾಮಿಗಳು ಹೇಳಿದರು.

ಶ್ರೀಮುರುಘಾಮಠದಲ್ಲಿ ಆಯೋಜಿಸಿದ್ದ ಶ್ರೀ ಜಗದ್ಗುರು ಜಯದೇವ ಜಂಗೀಕುಸ್ತಿ ಕಾರ್ಯಕ್ರಮದ ಸಮ್ಮುಖ ವಹಿಸಿ ಅವರು ಮಾತನಾಡಿದರು.

ದೇಶೀಯ ಹಳೆಯ ಕ್ರೀಡೆಗಳನ್ನು ಪ್ರೋತ್ಸಾಹಿಸಿ ಬೆಳಸುತ್ತಿರುವುದು ಶ್ರೀಮಠ. ಶ್ರೀಮಠದ ವತಿಯಿಂದ ಪ್ರತಿ ಸಾಲಿನಲ್ಲೂ ಕುಸ್ತಿ ಪಂದ್ಯಾವಳಿಯನ್ನು ನಡೆಸುತ್ತಾ ಬರಲಾಗಿದೆ. ಯುವಕರು ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.

ಚಿತ್ರದುರ್ಗದ ಶ್ರೀ ಮೇದಾರ ಕೇತೇಶ್ವರ ಗುರುಪೀಠದ ಶ್ರೀ ಇಮ್ಮಡಿ ಬಸವ ಕೇತೇಶ್ವರ ಸ್ವಾಮಿಗಳು ಮಾತನಾಡಿ, ಕುಸ್ತಿ ಪಂದ್ಯಾವಳಿಯು ಮೈಸೂರು ಬಿಟ್ಟರೆ ಚಿತ್ರದುರ್ಗದಲ್ಲಿ ಪ್ರತಿ ವರ್ಷ ನಡೆಯುತ್ತದೆ. ಇಲ್ಲಿ ಭಾಗವಹಿಸಿದ ಕುಸ್ತಿಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲೂ ತಮ್ಮ ಸಾಧನೆ ತೋರುವಂತಾಗಬೇಕು ಎಂದು ನುಡಿದರು.

ಹೊಳವನಹಳ್ಳಿ ಶ್ರೀ ಪುಟ್ಟೇಶ್ವರಸ್ವಾಮಿ ಮಠದ ಶ್ರೀ ತಿಪ್ಪೇರುದ್ರಸ್ವಾಮಿಗಳು ಮಾತನಾಡಿ, ಭಾರತ ದೇಶ ವಿಶ್ವಕ್ಕೆ ಗುರುವಾಗಿದೆ. ಕಾರಣ 64 ವಿದ್ಯೆಗಳನ್ನು ಹೊಂದಿರುವ ದೇಶವಾಗಿದೆ. ಈ ದೇಶೀಯ ಕ್ರೀಡೆಯನ್ನು ಜಗತ್ತಿಗೆ ಭಾರತ ನೀಡಿದೆ. ಕುಸ್ತಿಪಟುಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ  ಶರಣ ಸಂಸ್ಕøತಿ ಉತ್ಸವ-2023ರ ಗೌರವಾಧ್ಯಕ್ಷರಾದ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು, ಉಸ್ತುವಾರಿ ಶ್ರೀಗಳಾದ ಶ್ರೀ ಬಸವಪ್ರಭುಸ್ವಾಮಿಗಳು, ಎಸ್.ಜೆ.ಎಂ.ವಿದ್ಯಾಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಂ.ಭರತ್‍ಕುಮಾರ್, ಶರಣಸಂಸ್ಕøತಿ ಉತ್ಸವ-2023ರ ಕಾರ್ಯಾಧ್ಯಕ್ಷರಾದ ಶ್ರೀ ಕೆ.ಸಿ.ನಾಗರಾಜ್, ಮಠದ ಕುರುಬರಹಟ್ಟಿ ಗ್ರಾಮಪಂಚಾಯಿತಿ ಅಧ್ಯಕ್ಷ ಗಣೇಶ್.ಆರ್. ಹಾಗೂ ವಿವಿಧ ಮಠಾದೀಶರು, ಹರಗುರು ಚರಮೂರ್ತಿಗಳು ಉಪಸ್ಥಿತರಿದ್ದರು.

ಈ ಕುಸ್ತಿ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳಾದ, ತೆಲ್ಲಂಗಾಣ, ಆಂದ್ರಪ್ರದೇಶ,  ಮಹಾರಾಷ್ಟ, ಪಂಜಾಬ್ ಹಾಗೂ ಕರ್ನಾಟಕದ ಮೈಸೂರು, ಬೆಳಗಾವಿ, ಹುಬ್ಬಳ್ಳಿ, ದಾರವಾಡ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳು ಸೇರಿದಂತೆ 80-90 ಜೋಡಿಗಳು ಭಾಗವಹಿಸಿದ್ದವು.

ತೀರ್ಪುಗಾರರಾಗಿ ತಿಪ್ಪೇಸ್ವಾಮಿ, ಅಮೃತ್ ಪುರೋಹಿತ, ಮರಡಿ, ಭರತ್, ಮಹಮದ್ ಆಲಿ, ಆಸೀಫುಲ್ಲಾ, ಕೃಷ್ಣಮೂತಿ ಸಿ ದೊಡ್ಡಗರಡಿ ಕಾರ್ಯನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಮುರುಗೇಶ್ ನಿರೂಪಿಸಿದರು. ಈ ಸಂದರ್ಭದಲ್ಲಿ ಪಾತ್ಯರಾಜನ್, ವಿಶ್ವನಾಥ್ ಕೆ ಎನ್, ಮಹೇಂದ್ರನಾಥ್, ಬಿ ಜಿ ನಾಗರಾಜ್, ವಿರೇಂದ್ರಕುಮಾರ್, ಡಾ.ಕುಮಾರಸ್ವಾಮಿ, ಪ್ರಶಾಂತ್, ನಾಗಾನಾಯ್ಕ್, ಮಂಜುನಾಥ್, ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment